ದತ್ತ ಕುಮಾರ್‌ಗೆ ಪಿ.ಹೆಚ್.ಡಿ ಪ್ರದಾನ

Upayuktha
0


ಮಂಗಳೂರು: ಮುನಿಯಾಲಿನ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕ ದತ್ತ ಕುಮಾರ್ ಅವರು "ರೂರಲ್ ಇನ್ಫ್ರಾಸ್ಟ್ರಕ್ಚರ್ ಫಂಡಿಂಗ್- ಎ ಸ್ಟಡಿ ಆನ್ ಯುಟಿಲೈಜೇಷನ್ ಅಂಡ್ ಡೆವಲಪ್ಮೆಂಟ್ ಇನ್ ಉಡುಪಿ ಡಿಸ್ಟ್ರಿಕ್ಟ್ ಆಫ್ ಕರ್ನಾಟಕ" ಎಂಬ ವಿಷಯದ ಕುರಿತಾಗಿ ಮಂಡಿಸಿದ ಸಂಶೋಧನಾ ಮಹಾಪ್ರಬಂಧಕ್ಕೆ ಮಂಗಳೂರು ವಿಶ್ವವಿದ್ಯಾನಿಲಯ ಪಿ.ಎಚ್.ಡಿ ಪದವಿ ನೀಡಿ ಗೌರವಿಸಿದೆ.


ಇವರು ಮಂಗಳೂರು ವಿಶ್ವವಿದ್ಯಾನಿಲಯ ಕಾಲೇಜಿನ ವಾಣಿಜ್ಯ ವಿಭಾಗದ ಪ್ರಾಧ್ಯಾಪಕ ಪ್ರೊ. ಎ ಸಿದ್ದಿಕ್ ಅವರ ಮಾರ್ಗದರ್ಶನದಲ್ಲಿ ಪ್ರಬಂಧ ಸಿದ್ಧಪಡಿಸಿದ್ದರು.


ದತ್ತ ಕುಮಾರ್ ಅವರು ತಟ್ಟೂರಿನ ದಿ. ಅಣ್ಣು ನಾಯಕ್ ಮತ್ತು ಜಯಶ್ರೀ ನಾಯಕ್ ರವರ ಪುತ್ರ. ಇವರು ಬೈರಂಜೆಯ ಶ್ರೀ ಶಾರದಾ ಖಾಸಗಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪ್ರಾಥಮಿಕ ಶಿಕ್ಷಣ, ಪರ್ಕಳ ಹೈಸ್ಕೂಲಿನಲ್ಲಿ ಪ್ರೌಢ ಶಿಕ್ಷಣ, ಸರಕಾರಿ ಪದವಿಪೂರ್ವ ಕಾಲೇಜು ಹಿರಿಯಡ್ಕದಲ್ಲಿ ಪಿಯುಸಿ, ಸರಕಾರಿ ಪ್ರಥಮ ದರ್ಜೆ ಕಾಲೇಜು ಹಿರಿಯಡ್ಕದಲ್ಲಿ ಪದವಿ ಹಾಗೂ ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಎಂ.ಕಾಂ  ಪದವಿಯನ್ನು ಪಡೆದಿರುತ್ತಾರೆ. ಇವರು ನಗರದ ಸಂತ ಅಲೋಶಿಯಸ್ ಕಾಲೇಜು, ಮಂಗಳೂರಿನಲ್ಲಿ 5 ವರ್ಷ ಸಹಾಯಕ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿರುತ್ತಾರೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter 

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top