ಆಳವಾದ ಜ್ಞಾನಕ್ಕೆ ಸ್ನಾತಕೋತ್ತರ ಅಧ್ಯಯನ ಅಗತ್ಯ: ಡಾ ಶ್ರೀಪತಿ ಕಲ್ಲೂರಾಯ

Upayuktha
0


ಪುತ್ತೂರು:
ವಿವೇಕಾನಂದ ಕಾಲೇಜಿನ ಪ್ರಥಮ ವರ್ಷದ ಸ್ನಾತಕೋತ್ತರ ಪದವಿ ತರಗತಿಗಳು ಈಗಾಗಲೇ ಪ್ರಾರಂಭವಾಗಿದ್ದು, ಕಾಲೇಜಿನ ಮೊದಲ ದಿನವೇ ವಿದ್ಯಾರ್ಥಿಗಳಿಗೆ ಮಾರ್ಗದರ್ಶನಾ ಕಾರ್ಯಕ್ರಮ ಎರಡು ಹಂತಗಳಾಗಿ ನೆರವೇರಿತು.



ಇಂದಿನ ವಿದ್ಯಮಾನದಲ್ಲಿ ಉದ್ಯೋಗಾವಕಾಶಗಳಿಗಾಗಿ ಸ್ಪರ್ಧಾತ್ಮಕ ಮನಸ್ಥಿತಿ ಹೆಚ್ಚಾಗಿದೆ. ಇವುಗಳ ನಡುವೆ ವಿದ್ಯಾರ್ಥಿಗಳು ಸಮರ್ಪಕವಾಗಿ ಹೋರಾಡಲು ಅಪಾರವಾದ ಜ್ಞಾನ ಮತ್ತು ಆಳವಾದ ಅಧ್ಯಯನದ ಅಗತ್ಯವಿದೆ. ಓದಿನ ಕಡೆಗೆ ವಿದ್ಯಾರ್ಥಿಗಳು ಹೆಚ್ಚಿನ ಒಲವು ತೋರಿದಾಗ ಮಾತ್ರ ಇದು ಸಾಧ್ಯ ಎಂದು ವಿವೇಕಾನಂದ ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷ, ಡಾ. ಶ್ರೀಪತಿ ಕಲ್ಲೂರಾಯ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.



ನಂತರ ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ವಿಷ್ಣು ಗಣಪತಿ ಭಟ್ ಮಾತನಾಡಿ, ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ, ಅಧ್ಯಯನ ಕೇಂದ್ರ, ವಿಶಾಲವಾದ ಗ್ರಂಥಾಲಯ ಹಾಗೂ ಸುಸಜ್ಜಿತ ಪ್ರಯೋಗಾಲಯಗಳ ವ್ಯವಸ್ಥೆಗಳು ಲಭ್ಯವಿದೆ. ಈ ಎಲ್ಲಾ ಸೌಲಭ್ಯಗಳನ್ನು ವಿದ್ಯಾರ್ಥಿಗಳು ಸಧೃಡವಾಗಿ ಉಪಯೋಗಿಸಿಕೊಳ್ಳಬೇಕು ಎಂದು ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ವಿದ್ಯಾರ್ಥಿ ಗಳನ್ನು ಉತ್ತೇಜಿಸಿದರು.



ಎರಡನೇ ಹಂತದ ಕಾರ್ಯಕ್ರಮದಲ್ಲಿ ಕಾಲೇಜಿನ ವಿಶೇಷ ಅಧಿಕಾರಿ, ಡಾ. ಶ್ರೀಧರ ನಾಯ್ಕ್ ಮಾತನಾಡಿ, ವಿದ್ಯಾರ್ಥಿಗಳು ಕಾಲಕ್ಕೆ ತಕ್ಕಂತೆ ಚುರುಕಗೊಳ್ಳಬೇಕು. ಎಲ್ಲಾ ಪಠ್ಯ ಹಾಗೂ ಪಠ್ಯೇತರ ವಿಷಯಗಳಲ್ಲಿ ಭಾಗಿಯಾಗಿ ಜೀವನದ ಮುಂದಿನ ಹಂತಕ್ಕೆ ಪರಿಪೂರ್ಣವಾಗಿ ತಯಾರಾಗಬೇಕಿದೆ ಎಂದರು. ಜೊತೆಗೆ ವಿವೇಕಾನಂದ ಕಾಲೇಜು ಈಗಾಗಲೇ ಸ್ವಾಯತ್ತ ಮಹಾವಿದ್ಯಾಲಯವಾಗಿದ್ದು, ವಿದ್ಯಾರ್ಥಿಗಳಿಗೆ ಹಲವಾರು ಅನುಕೂಲಗಳನ್ನು ಕಲ್ಪಿಸುವಲ್ಲಿ ಎಡೆಮಾಡಿಕೊಡಲಿದೆ ಎಂದು ಹೇಳಿದರು.



ಬಳಿಕ ಮಾತನಾಡಿದ ವಿವೇಕಾನಂದ ಕಾಲೇಜಿನ ಪರೀಕ್ಷಾಂಗ ಕುಲಸಚಿವರಾದ ಡಾ. ಶ್ರೀಧರ ಎಚ್. ಜಿ., ವಿದ್ಯಾರ್ಥಿಗಳು ಎನ್.ಇ.ಟಿ. ಮತ್ತು ಕೆ-ಸೆಟ್‌ಗಳಂತಹ ಅರ್ಹತಾ ಪರೀಕ್ಷೆಗಳಲ್ಲಿ ಉತ್ತೀರ್ಣರಾಗಲು ಪ್ರಯತ್ನಿಸಬೇಕು. ಅದಕ್ಕಾಗಿ ವಿದ್ಯಾರ್ಥಿಗಳಲ್ಲಿ ಹೆಚ್ಚಿನ ತಯಾರಿಗಳ ಆಗತ್ಯವಿದೆ ಜೊತೆಗೆ ಕಾಲೇಜಿನ ಪರೀಕ್ಷಾಂಗ ವಿಭಾಗವು ಪ್ರಶ್ನೆ ಪತ್ರಿಕೆಗಳ ತಯಾರಿ ಮತ್ತು ಉತ್ತರ ಪತ್ರಿಕೆಗಳ ಮೌಲ್ಯಮಾಪನದ ಗುಣಮಟ್ಟ ಕಾಯ್ದುಕೊಳ್ಳುವಲ್ಲಿ ಎಲ್ಲಾ ರೀತಿಯ ವ್ಯವಸ್ಥೆಗಳನ್ನು ಒಳಗೊಂಡಿದೆ ಎಂದರು.



ವಿವೇಕಾನಂದ ಸ್ನಾತಕೋತ್ತರ ಕೇಂದ್ರದ ಡೀನ್ ಡಾ. ವಿಜಯ ಸರಸ್ವತಿ ಎಲ್ಲರನ್ನೂ ಸ್ವಾಗತಿಸು ವುದರೊಂದಿಗೆ, ಕಾಲೇಜಿನ ಎಲ್ಲಾ ವ್ಯವಸ್ಥೆಗಳು ಮತ್ತು ತಮ್ಮ ಎರಡು ವರ್ಷದ ಶಿಕ್ಷಣದ ಪ್ರಯಾಣ ಹೇಗಿರಬೇಕು ಎಂಬುದರ ಬಗೆಗೆ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು. 



ಸ್ನಾತಕೋತ್ತರ ವಾಣಿಜ್ಯ ವಿಭಾಗದ ಉಪನ್ಯಾಸಕ ಡಾ. ರಾಘವೇಂದ್ರ ಧನ್ಯವಾದ ಸಮರ್ಪಿಸಿದರು. ಸ್ನಾತಕೋತ್ತರ ರಸಾಯನ ಶಾಸ್ತ್ರ ವಿಭಾಗದ ಮುಖ್ಯಸ್ಥೆ ಡಾ. ಹರ್ಷಿತ ಕಾರ್ಯಕ್ರಮ ನಿರೂಪಿಸಿದರು. ಕಾರ್ಯಕ್ರಮದಲ್ಲಿ ವಿವಿಧ ವಿಭಾಗದ ಉಪನ್ಯಾಸಕರು ಉಪಸ್ಥಿತರಿದ್ದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಚಾನೆಲ್ ಫಾಲೋ ಮಾಡಲು ಈ ಲಿಂಕ್ ಕ್ಲಿಕ್ ಮಾಡಿ


web counter

إرسال تعليق

0 تعليقات
إرسال تعليق (0)
To Top