ಪುತ್ತೂರು: ಜಿಲ್ಲಾಮಟ್ಟದ ಸ್ಪರ್ಧೆಯಲ್ಲಿ ನೆಲ್ಲಿಕಟ್ಟೆ ಅಂಬಿಕಾದ ವಿದ್ಯಾರ್ಥಿಗಳಿಗೆ ಬಹುಮಾನ

Upayuktha
0



ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ನೆಲ್ಲಿಕಟ್ಟೆಯ ಅಂಬಿಕಾ ಪದವಿಪೂರ್ವ ವಿದ್ಯಾಲಯದ ವಿದ್ಯಾರ್ಥಿಗಳು ಮಂಗಳೂರಿನ ಸಂತ ಅಲೋಶಿಯಸ್ ಕಾಲೇಜಿನಲ್ಲಿ ಸೆಪ್ಟೆಂಬರ್ 11ರಂದು ನಡೆದ ಜಿಲ್ಲಾ ಮಟ್ಟದ ವಿವಿಧ ಸ್ಪರ್ಧೆಗಳಲ್ಲಿ ಬಹುಮಾನ ಗಳಿಸಿದ್ದಾರೆ. 


ಪುರುಷರಕಟ್ಟೆಯ ಶಿವರಾಮ ಭಟ್ ಮತ್ತು ಪಾರ್ವತಿ ಸುಮ ದಂಪತಿಯ ಪುತ್ರ, ದ್ವಿತೀಯ ಪಿ.ಯು.ಸಿ. ವಿದ್ಯಾರ್ಥಿ ಶಮನ್ ಕೃಷ್ಣ ಮಾಕ್ ಪ್ರೆಸ್ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಗಳಿಸಿದರೆ,  ಶಾಂತಿಗೋಡಿನ ಗಣೇಶ್ ಪ್ರಭು ಮತ್ತು ರೇಖಾ ನಾಯಕ್ ದಂಪತಿಯ ಪುತ್ರ, ದ್ವಿತೀಯ ಪಿ.ಯು.ಸಿ. ವಿದ್ಯಾರ್ಥಿ ವಿಕೇಶ್ ಪ್ರಭು ಟ್ರೆಷರ್ ಹಂಟ್‍ನಲ್ಲಿ ತೃತೀಯ ಹಾಗೂ ಉರ್ಲಾಂಡಿಯ ಮನೋಹರ್ ಶೆಟ್ಟಿ ಮತ್ತು ಗಾಯತ್ರಿ ದಂಪತಿಯ ಪುತ್ರಿ, ದ್ವಿತೀಯ ಪಿ.ಯು.ಸಿ. ವಿದ್ಯಾರ್ಥಿನಿ ತನ್ವಿತಾ ಎಂ. ಶೆಟ್ಟಿ  ಸೃಜನಶೀಲ ಬರವಣಿಗೆ ಸ್ಪರ್ಧೆಯಲ್ಲಿ ತೃತೀಯ ಬಹುಮಾನ ಗಳಿಸಿಕೊಂಡಿರುತ್ತಾರೆ. 


  ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

'ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಚಾನೆಲ್ ಫಾಲೋ ಮಾಡಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
To Top