ಅಂಬಿಕಾ ವಿದ್ಯಾಲಯ ಸಿಬಿಎಸ್‍ಇ ಸಂಸ್ಥೆಯ ವಿದ್ಯಾರ್ಥಿನಿ ದೃಶಾನಗೆ ಬಹುಮಾನ

Upayuktha
0


ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯಲ್ಲಿನ ಅಂಬಿಕಾ ವಿದ್ಯಾಲಯ ಸಿಬಿಎಸ್‍ಇ ಸಂಸ್ಥೆಯ ವಿದ್ಯಾರ್ಥಿನಿ ದೃಶಾನ ಅವರು ದಕ್ಷಿಣ ಕನ್ನಡ ಅಥ್ಲೆಟಿಕ್ ಅಸೋಸಿಯೇಷನ್ ವತಿಯಿಂದ ಆಯೋಜಿಸಲಾಗಿದ್ದ ಜಿಲ್ಲಾ ಕಿರಿಯರ ಕ್ರೀಡಾಕೂಟ- 2023ರ 14 ವರ್ಷದೊಳಗಿನ ಬಾಲಕಿಯರ ಗುಂಡು ಎಸೆತ ಸ್ಪರ್ಧೆಯಲ್ಲಿ ತೃತೀಯ ಸ್ಥಾನ ಪಡೆದುಕೊಂಡಿದ್ದಾರೆ. 


ಬೆಟ್ಟಂಪಾಡಿಯ ಸುರೇಶ ಗೌಡ ಸರಳಿಕಾನ ಮತ್ತು ವಿದ್ಯಾಶ್ರೀ ದಂಪತಿಗಳ ಮಗಳಾದ ಇವರು ಪ್ರಸ್ತುತ 7ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ. ಮಂಗಳೂರಿನ ಮಂಗಳ ಕ್ರೀಡಾಂಗಣದಲ್ಲಿ ಸೆಪ್ಟೆಂಬರ್ 8ರಂದು ಈ ಸ್ಪರ್ಧೆ ಆಯೋಜನೆಗೊಂಡಿತ್ತು. ವಿದ್ಯಾರ್ಥಿನಿಯ ಸಾಧನೆಗೆ ಅಂಬಿಕಾ ವಿದ್ಯಾಲಯದ ಆಡಳಿತ ಮಂಡಳಿ ಹಾಗೂ ಅಧ್ಯಾಪಕ ಅಧ್ಯಾಪಕೇತರ ವೃಂದ ಶುಭಾಶಯ ತಿಳಿಸಿದೆ.


 ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter    

Post a Comment

0 Comments
Post a Comment (0)
Advt Slider:
To Top