ಜಿಲ್ಲಾ ಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟ: ವಿವೇಕಾನಂದ ಪ.ಪೂ ಕಾಲೇಜಿನ ಬಾಲಕರ ತಂಡ ಪ್ರಥಮ

Upayuktha
0



ಪುತ್ತೂರು: ವಿವೇಕಾನಂದ ವಿದ್ಯಾವರ್ಧಕ ಸಂಘದ ಸಹಯೋಗದೊಂದಿಗೆ ವಿವೇಕಾನಂದ ಕಾಲೇಜು ಕ್ರೀಡಾಂಗಣದಲ್ಲಿ ನಡೆಸಿದ ವಿದ್ಯಾಭಾರತಿ ಜಿಲ್ಲಾ ಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಾಲಕರ ತಂಡ ಪ್ರಥಮ ಹಾಗೂ ಬಾಲಕಿಯರ ತಂಡ ದ್ವಿತೀಯ ಸ್ಥಾನ ಪಡೆದಿದೆ.


ಬಾಲಕರ ವಿಭಾಗದಲ್ಲಿ ವಿದ್ಯಾರ್ಥಿಗಳಾದ ಅಭಿಷೇಕ್, ಮನ್ವಿತ್, ಪ್ರಮಥ್, ಆಶ್ಲೇಷ್, ಕೀರ್ತನ್ ಎಸ್ ಕೆ, ಧನುಷ್ ಕೆ, ಪ್ರಜ್ವಲ್ , ಮಿಥನ್, ವಹಿನ್, ನಿಹಾಲ್ ರಾಜ್, ಬ್ರಿಜೇಷ್,ಸುಶಾನ್, ಧನುಷ್ ಎಲ್, ಆರ್ಯ ಪಟೇಲ್, ದೀಕ್ಷಿತ್, ಪ್ರಕೃತ್,ಅಜಯ್, ಆಯುಷ್ ಭಾಗವಹಿಸಿದ್ದರು. ಬಾಲಕಿಯರ ವಿಭಾಗದಲ್ಲಿ ವಿದ್ಯಾರ್ಥಿನಿಯರಾದ ನಿಷಾ ಬಿ ಎಂ, ಅಶ್ವತಿ, ತನ್ವಿ ಎಸ್, ಕಾರ್ತಿಕಾ, ಛಾಯಾ, ನಿಶಾ ಎ ಎಸ್, ಹೇಮಲತಾ, ಸಾತ್ವಿ, ತ್ರಿಷಾ, ಅನ್ನಪೂರ್ಣ ಭಾಗವಹಿಸಿದ್ದರು.


ಈ ತಂಡವು ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ರವಿಶಂಕರ್, ಡಾ. ಜ್ಯೋತಿ ಮತ್ತು ಯತೀಶ್ ಇವರ ನೇತೃತ್ವದಲ್ಲಿ ತರಬೇತಿಯನ್ನು ಪಡೆದಿರುತ್ತಾರೆ. ವಿದ್ಯಾರ್ಥಿಗಳ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಅಧ್ಯಾಪಕ ಮತ್ತು ಅಧ್ಯಾಪಕೇತರ ವೃಂದ ಅಭಿನಂದಿಸಿದ್ದಾರೆ. 


 ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter 

إرسال تعليق

0 تعليقات
إرسال تعليق (0)
Mandovi Motors Presents MONSOON BONANZA
Mandovi Motors Presents MONSOON BONANZA
To Top