ಮನೆ ಮನೆಯಲ್ಲಿ ಏಕಾದಶ ಕೋಟಿ ಮಹಾಲಿಂಗೇಶ್ವರ ಜಪಯಜ್ಞ: ಸೆ.2ರಿಂದ 24ರ ವರೆಗೆ

Upayuktha
0


ಪುತ್ತೂರು: ಪುತ್ತೂರಿನ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವತಿಯಿಂದ ಲೋಕ ಕಲ್ಯಾಣಾರ್ಥ, ಸಮಗ್ರತೆ, ಹಿಂದೂ ಬಾಂಧವರ ಏಕತೆ ಮತ್ತು ಮನಸ್ಸಿನ ಏಕಾಗ್ರತೆ ಸಿದ್ಧಿಗಾಗಿ ಬ್ರಹ್ಮಶ್ರೀ ಕುಂಟಾರು ರವೀಶ ತಂತ್ರಿಗಳ ನೇತೃತ್ವದಲ್ಲಿ ಮನೆ ಮನೆಯಲ್ಲಿ ಏಕಾದಶ ಕೋಟಿ ಮಹಾಲಿಂಗೇಶ್ವರ ಜಪಯಜ್ಞ ನಡೆಯಲಿದೆ.


ಸೆಪ್ಟೆಂಬರ್ 2ರಿಂದ 24ರ ವರೆಗೆ ಈ ಮಹಾ ಜಪಯಜ್ಞ ಪ್ರತಿದಿನ ಬೆಳಗ್ಗೆ 6:30 ಹಾಗೂ ಸಂಜೆ 6:30 ಗಂಟೆಗೆ ನಡೆಯಲಿದೆ.


ದೇವಳಗಳಲ್ಲಿ, ಜಪಕೇಂದ್ರಗಳಲ್ಲಿ ಮತ್ತು ಮನೆ ಮನೆಗಳಲ್ಲಿ ಜಪದ ಸಂಕಲ್ಪ ನಾಳೆ ಬೆಳಗ್ಗೆ ನಡೆಯಲಿದೆ. ಅದಕ್ಕಾಗಿ ಜನರು ನಾಳೆ ಬೆಳಗ್ಗೆ ತಮ್ಮ ತಮ್ಮ ಮನೆಗಳಲ್ಲಿ ಅಥವಾ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬಂದು ಸೇರುವಂತೆ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಕೇಶವಪ್ರಸಾದ್ ಮುಳಿಯ ಹಾಗೂ ಕಾರ್ಯನಿರ್ವಹಣಾಧೀಕಾರಿ ಕೆ.ವಿ ಶ್ರೀನಿವಾಸ ಅವರು ಪ್ರಕಟಣೆಯಲ್ಲಿ ಕೋರಿದ್ದಾರೆ.


ಹೆಚ್ಚಿನ ಮಾಹಿತಿಗಾಗಿ ರೇಖಾ- 97316 67579' ಶೋಭಾ- 94498 31777 ಇವರನ್ನು ಸಂಪರ್ಕಿಸುವಂತೆ ಕೋರಲಾಗಿದೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter

إرسال تعليق

0 تعليقات
إرسال تعليق (0)
Mandovi Motors Presents MONSOON BONANZA
Mandovi Motors Presents MONSOON BONANZA
To Top