ವಿವೇಕಾನಂದ ಪದವಿ ಪೂರ್ವ ಕಾಲೇಜಿನಲ್ಲಿ ವಿಶೇಷ ಉಪನ್ಯಾಸ ಕಾರ್ಯಕ್ರಮ

Upayuktha
0

ಪುತ್ತೂರು: ವಿವೇಕಾನಂದ ಪದವಿ ಪೂರ್ವ ಕಾಲೇಜಿನ  ಕಲಾ ಮತ್ತು ವಾಣಿಜ್ಯ ಸಂಘದ ವತಿಯಿಂದ  ದಿತೀಯ ಪಿಯುಸಿ ಕಲಾ ಮತ್ತು  ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗಾಗಿ New Age Career Landscape for Z Generation students ಎಂಬ ವಿಷಯದ ಕುರಿತು ಉಪನ್ಯಾಸ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.


ಸಂಪನ್ಮೂಲ ವ್ಯಕ್ತಿಗಳಾಗಿ  ಆಗಮಿಸಿದ ಚಾಣಕ್ಯ ವಿಶ್ವವಿದ್ಯಾಲಯದ  ಮ್ಯಾನೇಜರ್ ಡಾ.ಪ್ರಶಾಂತ್ ಕುಮಾರ್ ಎಚ್.ಪಿ ಮಾತನಾಡಿ ಇಂದಿನ ಯುವಜನಾಂಗ ಯಾವ ರೀತಿ ಕೌಶಲ್ಯ ಹೆಚ್ಚಿಸಿಕೊಂಡು ಅವಕಾಶಗಳನ್ನು ಸರಿಯಾಗಿ ಬಳಸಿಕೊಂಡು ಮುನ್ನಡೆಯಬಹುದು ಎಂಬುದರ ಬಗ್ಗೆ ಮಾಹಿತಿ ನೀಡಿದರು.  ಜೊತೆಗೆ ವೃತ್ತಿ ಅವಕಾಶಗಳ ಕುರಿತು ಮಾಹಿತಿ ನೀಡಿದರು.


ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಕಾಲೇಜಿನ ಆಡಳಿತ ಮಂಡಳಿಯ ಸದಸ್ಯ ಡಾ.ಮುರಳಿಕೃಷ್ಣ ರೈ ಮಾತನಾಡಿ ವಿದ್ಯಾರ್ಥಿಗಳು ಅವಕಾಶಗಳನ್ನು ಸರಿಯಾಗಿ ಬಳಸಿಕೊಂಡು ಮುನ್ನಡೆದರೆ ಯಶಸ್ಸು ಖಚಿತ  ಎಂದು ತಿಳಿಸಿದರು. ಕಾಲೇಜಿನ ಪ್ರಾಂಶುಪಾಲ ಮಹೇಶ ನಿಟಿಲಾಪುರ ವಿದ್ಯಾರ್ಥಿಗಳಿಗೆ ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳುವಂತೆ ತಿಳಿಸಿದರು.ಕಾಲೇಜಿನ ಉಪಪ್ರಾಂಶುಪಾಲ  ದೇವಿಚರಣ್ ರೈ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.


ವಿದ್ಯಾರ್ಥಿನಿಯರಾದ ದೀಪ್ತಿ ಮತ್ತು ಪಲ್ಲವಿ ಪ್ರಾರ್ಥಿಸಿದರು. ಉಪನ್ಯಾಸಕಿ ಮೋನಿಷಾ ಸ್ವಾಗತಿಸಿ ವಂದಿಸಿದರು. ಉಪನ್ಯಾಸಕಿ ಉಷಾ ಕಾರ್ಯಕ್ರಮ ನಿರೂಪಿಸಿದರು.


 ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter 

Post a Comment

0 Comments
Post a Comment (0)
Maruti Suzuki Festival of Colours
Maruti Suzuki Festival of Colours
To Top