ಪುತ್ತೂರು: ಪ್ಲಾಸ್ಮಾ ತಂತ್ರಜ್ಞಾನದ ವಸ್ತು ಪ್ರದರ್ಶನ ಮತ್ತು ರಾಷ್ಟ್ರೀಯ ವಿಚಾರ ಸಂಕಿರಣದ ಸಮಾರೋಪ ಸಮಾರಂಭ

Upayuktha
0



ಪುತ್ತೂರು: ಮೂರು ದಿನಗಳ ಕಾಲ ನಡೆದ ಪ್ಲಾಸ್ಮಾ ತಂತ್ರಜ್ಞಾನದ ವಸ್ತು ಪ್ರದರ್ಶನ ಮತ್ತು ರಾಷ್ಟ್ರೀಯ ವಿಚಾರ ಸಂಕಿರಣ ವಿದ್ಯಾರ್ಥಿಗಳಿಂದ ವಿದ್ಯಾರ್ಥಿಗಳಿಗೆ ನಡೆದಿದೆ ಮತ್ತು ಇದು ಯಶಸ್ಸನ್ನು ಕಂಡಿದೆ. ಇಲ್ಲಿನ  ವಿದ್ಯಾರ್ಥಿಗಳು ಪ್ಲಾಸ್ಮಾ ತಂತ್ರಜ್ಞಾನದ ಕುರಿತು ನಾವು ಹೇಳಿದ್ದನ್ನು ಚೆನ್ನಾಗಿ ಅರ್ಥ ಮಾಡಿಕೊಂಡು ಇದನ್ನು ತಿಳಿಯಲು ಬಂದ ವಿದ್ಯಾರ್ಥಿಗಳಿಗೆ ಅರ್ಥವಾಗುವ ರೀತಿಯಲ್ಲಿ ವಿವರಿಸಿದ್ದಾರೆ. ಎಲ್ಲಾ ವಿದ್ಯಾರ್ಥಿಗಳು ಅತ್ಯಂತ ಆಸಕ್ತಿಯಿಂದ ಭಾಗವಹಿಸಿದ್ದಾರೆ. ವಿವೇಕಾನಂದ ವಿದ್ಯಾಸಂಸ್ಥೆಯು ನಮ್ಮ ತಂಡಕ್ಕೆ ಸಂಪೂರ್ಣ ಸಹಕಾರವನ್ನು ನೀಡಿದೆ ಎಂದು ಸಮುದಾಯ ಸಂಪರ್ಕ ವಿಭಾಗ, ಐ.ಪಿ.ಆರ್‍ ಅಹಮದಾಬಾದ್‍ ಇದರ ಮುಖ್ಯಸ್ಥ ಡಾ. ಎ.ವಿ. ರವಿಕುಮಾರ್ ಹೇಳಿದರು.


ಇವರು ಪ್ಲಾಸ್ಮಾ ಸಂಶೋಧನಾಕೇಂದ್ರ, ಅಹಮದಾಬಾದ್ ಮತ್ತು  ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ ( ಸ್ವಾಯತ್ತ) ಪುತ್ತೂರು, ಐಕ್ಯುಎಸಿ  ಮತ್ತು ವಿಜ್ಞಾನ ಸಂಘದ ಸಹಯೋಗದಲ್ಲಿ ನಡೆದ ಪ್ಲಾಸ್ಮಾ ತಂತ್ರಜ್ಞಾನದ ಕುರಿತು ರಾಷ್ಟ್ರೀಯ ವಿಚಾರ ಸಂಕಿರಣ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು.


ಕಾರ್ಯಕ್ರಮದಲ್ಲಿ ಸಮುದಾಯ ಸಂಪರ್ಕ ವಿಭಾಗ, ಐ.ಪಿ.ಆರ್‍ ಅಹಮದಾಬಾದ್‍ ಇದರ ಮುಖ್ಯಸ್ಥ ಡಾ. ಎ.ವಿರವಿಕುಮಾರ್ ಮತ್ತು ಸದಸ್ಯರುಗಳಾದ ಛಾಯಚೌದ, ಹರ್ಷ ಮಚ್ಚಾರ್, ರಮೇಶ್ ಬಾಬು ಗತ್ತು,  ಚೇತನ್‍ ಜರಿವಾಲಾ, ಕಾರ್ತಿಕ್ ಮೋಹನ್‍ ಇವರನ್ನು ಸನ್ಮಾನಿಸಲಾಯಿತು.


ದ್ವಿತೀಯ ಬಿ ಎಸ್ಸಿ ವಿಭಾಗದ ವಿದ್ಯಾರ್ಥಿಗಳಾದ ಮನ್ಮಶ್ರೀ ಮತ್ತು ಧನ್ಯಶ್ರೀ ಕಾರ್ಯಕ್ರಮದ ಕುರಿತಾಗಿ ತಮ್ಮ ಅನಿಸಿಕೆಗಳನ್ನು ಹಂಚಿಕೊಂಡರು.


ವೇದಿಕೆಯಲ್ಲಿ ಕಾಲೇಜಿನ ವಿಶೇಷಅಧಿಕಾರಿ ಮತ್ತು ಇತಿಹಾಸ ವಿಭಾಗದ ಮುಖ್ಯಸ್ಥ ಡಾ. ಶ್ರೀಧರ್ ನಾಯ್ಕ್ ಉಪಸ್ಥಿತರಿದ್ದರು.

ಕಾರ್ಯಕ್ರಮವನ್ನು ಐಕ್ಯುಎಸಿ ಘಟಕದ ಸಂಯೋಜಕ ಮತ್ತು ಭೌತಶಾಸ್ತ್ರ  ವಿಭಾಗದ ಉಪನ್ಯಾಸಕ ಪ್ರೊ. ಶಿವಪ್ರಸಾದ್ ಕೆ ಎಸ್ ಸ್ವಾಗತಿಸಿ, ರಸಾಯನಶಾಸ್ತ್ರ ವಿಭಾಗದ ಉಪನ್ಯಾಸಕಿ ಮತ್ತು ವಿಜ್ಞಾನ ಸಂಘದ ಸಂಯೋಜಕಿ ನಿಶಾ. ಎನ್ ವಂದಿಸಿ, ಸ್ನಾತಕೋತ್ತರ ವಿಭಾಗದ ಡೀನ್‍ ಡಾ. ವಿಜಯ ಸರಸ್ವತಿ ನಿರ್ವಹಿಸಿದರು.


  ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top