ಮಂಗಳೂರು: ಶ್ರೀನಿವಾಸ್ ಯೂನಿವರ್ಸಿಟಿ ಇನ್‌ಸ್ಟಿಟ್ಯೂಟ್ ಆಫ್ ಫಿಸಿಯೋಥೆರಪಿ ಓರಿಯಂಟೇಶನ್ ಕಾರ್ಯಕ್ರಮವು ಬುಧವಾರ (ಸೆ. 20) ಮಂಗಳೂರಿನ ಹೋಟೆಲ್ ಶ್ರೀನಿವಾಸ್‌ನಲ್ಲಿ ನಡೆಯಿತು.
ಕಾರ್ಯಕ್ರಮದ ಮುಖ್ಯ ಅತಿಥಿಗಳಾದ ಶ್ರೀನಿವಾಸ್ ವಿಶ್ವವಿದ್ಯಾನಿಲಯದ ಗೌರವಾನ್ವಿತ ಪ್ರೊ-ಚಾನ್ಸಲರ್ ಮತ್ತು ಎ ಶಾಮರಾವ್ ಪ್ರತಿಷ್ಠಾನದ ಉಪಾಧ್ಯಕ್ಷ ಡಾ. ಎ. ಶ್ರೀನಿವಾಸ ರಾವ್ ಅವರು ಮಾತನಾಡಿ, ತಮ್ಮ ವಿದ್ಯಾರ್ಥಿಗಳು ಜನರಿಗೆ ಸರಿಯಾದ ಶುಶ್ರೂಷೆ ನೀಡಿ ಅವರ ಸಮಸ್ಯೆಗಳನ್ನು ಬಗೆಹರಿಸಿ ಅವರ ಮುಖದಲ್ಲಿ ನಗುವನ್ನು ಮೂಡಿಸಲು ಸಮರ್ಥರಾಗುವಂತೆ ತರಬೇತುಗೊಳಿಸಲಾಗುತ್ತದೆ ಎಂದು ನುಡಿದರು.
ಫಿಸಿಯೋಥೆರಪಿಗೆ ಸಂಬಂಧಿಸಿದ ರಾಜ್ಯ ಮಟ್ಟದ ಸಮ್ಮೇಳನವನ್ನು ಶೀಘ್ರವೇ ಹಮ್ಮಿಕೊಳ್ಳಲಾಗುವುದು ಎಂದು ತಿಳಿಸಿದರು.
ಕಾರ್ಯಕ್ರಮದ ಅಧ್ಯಕ್ಷರಾದ ಶ್ರೀನಿವಾಸ್ ವಿಶ್ವವಿದ್ಯಾನಿಲಯದ ಗೌರವಾನ್ವಿತ ಕುಲಪತಿಗಳು ಹಾಗೂ ಎ ಶಾಮರಾವ್ ಪ್ರತಿಷ್ಠಾನದ ಅಧ್ಯಕ್ಷ ಡಾ. ಸಿ.ಎ. ಎ. ರಾಘವೇಂದ್ರ ರಾವ್ ಮಾತನಾಡಿ, ದೇಹವನ್ನು ಕತ್ತರಿಸದೆ ಚಿಕಿತ್ಸೆ ನೀಡುವ ವೃತ್ತಿ ಇದಾಗಿದೆ. ಶ್ರೀನಿವಾಸ್ ಸಂಸ್ಥೆಯಲ್ಲಿ ವಿದ್ಯಾರ್ಥಿಗಳಿಗೆ ಜ್ಞಾನ ಸಂಪಾದನೆಯ ಸುಂದರ ಪಯಣ ಸಾಗಲಿ ಎಂದು ಶುಭ ಹಾರೈಸಿದರು.
ಶ್ರೀನಿವಾಸ್ ವಿಶ್ವವಿದ್ಯಾಲಯದ ಆಡಳಿತ ಮಂಡಳಿಯ ಟ್ರಸ್ಟಿ ಸದಸ್ಯೆ ಶ್ರೀಮತಿ ಎ. ವಿಜಯಲಕ್ಷ್ಮಿ ಆರ್.ರಾವ್ ಅವರು ತಮ್ಮ ಫಿಸಿಯೋಥೆರಪಿಯ ಅನುಭವವನ್ನು ಹಂಚಿಕೊಂಡರು ಮತ್ತು ಇಂದು ಅದು ಹೇಗೆ ಜೀವನದ ಅವಿಭಾಜ್ಯ ಅಂಗವಾಗಿದೆ ಎಂದು ವಿವರಿಸಿದರು.
ಶ್ರೀನಿವಾಸ್ ವಿಶ್ವವಿದ್ಯಾಲಯದ ಆಡಳಿತ ಮಂಡಳಿಯ ಟ್ರಸ್ಟಿ ಸದಸ್ಯರಾದ ಪ್ರೊ. ಎ.ಮಿತ್ರಾ ಎಸ್.ರಾವ್, ವಿದ್ಯಾರ್ಥಿಗಳು ಫಿಸಿಯೋಥೆರಪಿ ಕ್ಷೇತ್ರಕ್ಕೆ ಸೇರುತ್ತಿರುವುದು ಮತ್ತು ಅವರ ಪೋಷಕರ ಬೆಂಬಲವನ್ನು ಕಂಡು ಹೆಮ್ಮೆ ವ್ಯಕ್ತಪಡಿಸಿದರು. ಅವರು ಕೇವಲ ಕೋರ್ಸ್ ಅನ್ನು ಆಯ್ಕೆ ಮಾಡಿಲ್ಲ, ಅಗತ್ಯವಿರುವ ಜನರಿಗೆ ಚಿಕಿತ್ಸೆ ನೀಡುವ ಜವಾಬ್ದಾರಿಯನ್ನು ವಹಿಸಿಕೊಂಡಿದ್ದಾರೆ ಎಂದು ಹೇಳಿದರು.
ಶ್ರೀನಿವಾಸ್ ವಿಶ್ವವಿದ್ಯಾಲಯದ ಉಪಕುಲಪತಿ ಡಾ. ಪಿ.ಎಸ್. ಐತಾಳ್, ತಮ್ಮ ಕಾಲೇಜಿನಲ್ಲಿ ಫಿಸಿಯೋಥೆರಪಿಯಲ್ಲಿ ಪದವಿ ಪಡೆದ ವಿದ್ಯಾರ್ಥಿಗಳು ಪ್ರಪಂಚದಾದ್ಯಂತ ಇದ್ದಾರೆ ಎಂದು ಸಂತಸ ಹಂಚಿಕೊಂಡರು. ವಿದ್ಯಾರ್ಥಿಗಳು ಯಾವಾಗಲೂ ದೊಡ್ಡ ಕನಸುಗಳನ್ನು ಕಾಣಬೇಕು ಮತ್ತು ತಮ್ಮ ಕೌಶಲ್ಯವನ್ನು ಸುಧಾರಿಸಿಕೊಳ್ಳಬೇಕು ಎಂದು ಹಾರೈಸಿದರು.
ಶ್ರೀನಿವಾಸ್ ವಿಶ್ವವಿದ್ಯಾನಿಲಯದ ಅಭಿವೃದ್ಧಿ ಕುಲಸಚಿವ ಡಾ.ಅಜಯ್ ಕುಮಾರ್, ವಿದ್ಯಾರ್ಥಿಗಳು ಈ ವೃತ್ತಿಯಲ್ಲಿ ಮುಂದಿನ ಪ್ರಯತ್ನಗಳಿಗೆ ಶುಭ ಹಾರೈಸಿದರು.
ಇನ್‌ಸ್ಟಿಟ್ಯೂಟ್ ಆಫ್ ಫಿಸಿಯೋಥೆರಪಿ ಡೀನ್ ಡಾ.ರಾಜಶೇಖರ್ ಎಸ್ ಸ್ವಾಗತಿಸಿ, ಡಾ. ಪ್ರೇಮ್ ಕುಮಾರ್ ವಂದಿಸಿದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಚಾನೆಲ್ ಫಾಲೋ ಮಾಡಲು ಈ ಲಿಂಕ್ ಕ್ಲಿಕ್ ಮಾಡಿ