ಮಂಗಳೂರು: ಸಾರ್ವಜನಿಕವಾಗಿ ಗಣೇಶೋತ್ಸವವನ್ನು ಆಚರಿಸುವುದರಿಂದ ಸಮಾಜದಲ್ಲಿ ಮಧುರ ಬಾಂಧವ್ಯ ವೃದ್ಧಿಯಾಗಿ ಒಗ್ಗಟ್ಟು ಬಲಗೊಳ್ಳುತ್ತದೆ ಎಂದು ಕನ್ನಡ ಸಾಹಿತ್ಯ ಪರಿಷತ್ ಮಂಗಳೂರು ತಾಲೂಕು ಘಟಕದ ಕೋಶಾಧಿಕಾರಿ, ಕವಿ ಎನ್. ಸುಬ್ರಾಯ ಭಟ್ ಹೇಳಿದರು.
ಅವರು ಶ್ರೀ ಮಹಾಮಾರಿಯಮ್ಮ ಯುವಕ ವೃಂದ, ಗೌರಿ ಮಠ ರಸ್ತೆ, ಮಂಗಳೂರು ವತಿಯಿಂದ ನಡೆದ 32ನೇ ವರ್ಷದ ಸಾರ್ವಜನಿಕ ಗಣೇಶೋತ್ಸವದ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಎಲ್ಲರೂ ಉತ್ಸಾಹದಿಂದ ಪಾಲ್ಗೊಳ್ಳುವ ಮೂಲಕ ಯುವಕರಲ್ಲಿ ನಾಯಕತ್ವ ಗುಣ, ಸಂಘಟನಾ ಚಾತುರ್ಯ ಬೆಳೆಯುತ್ತದೆ ಮತ್ತು ಮಕ್ಕಳ ಪ್ರತಿಭಾ ಪ್ರದರ್ಶನಕ್ಕೂ ವೇದಿಕೆ ಲಭಿಸುತ್ತದೆ ಎಂದು ವಿವರಿಸಿದರು.
ಶ್ರೀನಿಧಿ ಕಂಪ್ಯೂಟರ್ಸ್ ಪ್ರೈ ಲಿ. ಆಡಳಿತ ನಿರ್ದೇಶಕ ರಾಜೇಶ್ ಎಸ್. ರಾವ್ ಮುಖ್ಯ ಅತಿಥಿಯಾಗಿದ್ದರು. ತೆಲುಗು ಶೆಟ್ಟಿ ಸಂಘದ ಅಧ್ಯಕ್ಷ ಕನಕರಾಜ್ ಮಾತನಾಡಿ, ಶ್ರೀ ಮಹಾಮಾರಿಯಮ್ಮ ಕ್ಷೇತ್ರದ ನವೀಕರಣಕ್ಕೆ ಎಲ್ಲರೂ ಕೈ ಜೋಡಿಸಬೇಕೆಂದು ಮನವಿ ಮಾಡಿದರು.
ಕ್ಷೇತ್ರದ ಆಡಳಿತ ಮೊಕ್ತೇಸರ ತಂಗವೇಲು, ಮಹಿಳಾ ಮಂಡಳಿಯ ಅಧ್ಯಕ್ಷೆ ಸರೋಜಾ, ಯುವಕ ವೃಂದದ ಅಧ್ಯಕ್ಷ ರಾಜೇಶ್ ಉಪಸ್ಥಿತರಿದ್ದರು. ಗಣೇಶೋತ್ಸವದ ಅಂಗವಾಗಿ ಏರ್ಪಡಿಸಿದ್ದ ಚಿತ್ರಕಲಾ ಸ್ಪರ್ಧೆಯಲ್ಲಿ ವಿಜೇತರಾದ ಮಕ್ಕಳಿಗೆ ಬಹುಮಾನ ವಿತರಿಸಲಾಯಿತು ಮತ್ತು ಶೈಕ್ಷಣಿಕ ಸಾಧನೆಗೈದ ಪರಿಸರದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.
ಮಹಿಳಾ ಮಂಡಳಿಯ ಸದಸ್ಯೆಯರು ಪ್ರಾರ್ಥಿಸಿದರು. ವಿದ್ಯಾ ದಿನೇಶ್ ನಿರೂಪಿಸಿದರು. ಪಿ. ಸಿ. ಗುರು ವಂದಿಸಿದರು.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ