
ಮಂಗಳೂರು: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಹಯೋಗದಲ್ಲಿ ಹಿರಿಯ ನಾಗರಿಕರ ದಿನಾಚರಣೆ ಅಕ್ಟೋಬರ್ 1ರಂದು ಬೆಳಿಗ್ಗೆ 10 ಗಂಟೆಗೆ ನಗರದ ಜಿಲ್ಲಾ ಪಂಚಾಯತ್‌ನ ನೇತ್ರಾವತಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.
ವಿಧಾನಸಭೆಯ ಸಭಾಧ್ಯಕ್ಷ ಯು.ಟಿ. ಖಾದರ್ ಫರೀದ್ ಅವರು ಘನ ಉಪಸ್ಥಿತಿ ವಹಿಸಲಿದ್ದು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರ ಹಾಗೂ ಹಿರಿಯನಾಗರಿಕರ ಸಬಲೀಕರಣ ಇಲಾಖೆಯ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಗಣ್ಯ ಉಪಸ್ಥಿತಿ ವಹಿಸಲಿದ್ದು, ಶಾಸಕರಾದ ಡಿ. ವೇದವ್ಯಾಸ ಕಾಮತ್ ಅಧ್ಯಕ್ಷತೆ ವಹಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಸಂಸದರಾದ ನಳಿನ್ ಕುಮಾರ್ ಕಟೀಲ್, ರಾಜ್ಯಸಭಾ ಸಂಸದರಾದ ವೀರೇಂದ್ರ ಹೆಗ್ಗಡೆ, ಶಾಸಕರಾದ ಡಾ. ಭರತ್ ಶೆಟ್ಟಿ ವೈ, ವಿಧಾನ ಪರಿಷತ್ ಶಾಸಕರಾದ ಕೋಟ ಶ್ರೀನಿವಾಸ ಪೂಜಾರಿ, ಬಿ.ಎಂ. ಫಾರೂಕ್, ಕೆ. ಹರೀಶ್ ಕುಮಾರ್, ಎಸ್.ಎಲ್. ಭೋಜೇಗೌಡ, ಪ್ರತಾಪ ಸಿಂಹ ನಾಯಕ್, ಕೆ. ಮಂಜುನಾಥ ಭಂಡಾರಿ, ಮಂಗಳೂರು ಮಹಾನಗರ ಪಾಲಿಕೆಯ ಮೇಯರ್ ಸುಧೀರ್ ಶೆಟ್ಟಿ ಭಾಗವಹಿಸಲಿದ್ದಾರೆ.
ವಿಶೇಷ ಆಹ್ವಾನಿತರಾಗಿ ಜಿಲ್ಲಾ ಪೊಲೀಸ್ ಆಯುಕ್ತರಾದ ಅನುಪಮಾ ಅಗರ್ವಾಲ್, ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಆನಂದ್ ಕೆ, ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶೋಭಾ ಬಿ.ಜಿ, ಪೊಲೀಸ್ ಅಧೀಕ್ಷüಕರಾದ ಸಿ.ಬಿ. ರಿಷ್ಯಂತ್, ಮಂಗಳೂರು ಮಹಾನಗರಪಾಲಿಕೆಯ ಆಯುಕ್ತರಾದ ಆನಂದ್ ಸಿ.ಎಲ್, ಪದ್ಮಶ್ರೀ ಪುರಸ್ಕೃತರಾದ ಅಮೈ ಮಹಾಲಿಂಗ ನಾಯ್ಕ್, ಹಾಗೂ ಹರೇಕಳ ಹಾಜಬ್ಬ ಭಾಗವಹಿಸಲಿದ್ದಾರೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಚಾನೆಲ್ ಫಾಲೋ ಮಾಡಲು ಈ ಲಿಂಕ್ ಕ್ಲಿಕ್ ಮಾಡಿ