ಮಂಗಳೂರು: ವಿಶ್ವೇಶ್ವರಯ್ಯನವರ ಬದುಕೇ ಒಂದು ಪಾಠ ಅವರ ಬದ್ಧತೆ, ಕರ್ತವ್ಯ ಶಕ್ತಿ, ಛಲ ಈ ಎಲ್ಲಾ ಗುಣಗಳು ನಮ್ಮನ್ನು ಅವರಿಸಿಕೊಳ್ಳಬೇಕು -ಅದು ನಮಗೆ ದಾರಿದೀಪವಾಗಬೇಕೆಂದು ಕಾದಂಬರಿಕಾರ ವಿವೇಕಾನಂದ ಕಾಮತ್ ಹೇಳಿದರು.
ಅವರು ಶ್ರೀ ಗೋಕರ್ಣನಾಥೇಶ್ವರ ಕಾಲೇಜಿನಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಸಾಹಿತ್ಯ ಪರಿಷತ್ತಿನ ಆಶ್ರಯದಲ್ಲಿ ನಡೆದ ಸರ್ ಎಂ ವಿಶ್ವೇಶ್ವರಯ್ಯರ ಜನ್ಮದಿನಾಚರಣೆಯ ಸಂದರ್ಭದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಸರ್ ಎಂ ವಿಶ್ವೇಶ್ವರಯ್ಯ ನವರ ಬದುಕು ಮತ್ತು ಸಾಧನೆಯ ಕುರಿತು ಮಾತನಾಡುತ್ತಿದ್ದರು.
ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಡಾ. ಎಂ.ಪಿ. ಶ್ರೀನಾಥ್ ರವರು ಉದ್ಘಾಟನೆಯನ್ನು ಮಾಡಿ ಸರ್ ಎಂ ವಿಶ್ವೇಶ್ವರಯ್ಯನವರ ಜೀವನ ಸಾಧನೆಯ ಔಚಿತ್ಯವನ್ನು ವಿದ್ಯಾರ್ಥಿಗಳಿಗೆ ಹೇಳಿದರು.
ಕ.ಸಾ.ಪ ಬೆಂಗಳೂರು ಕೇಂದ್ರೀಯ ಕಾರ್ಯಕಾರಿ ಸಮಿತಿಯ ಡಾ. ಮಾಧವ ಎಂ.ಕೆ ರವರು ಗೌರವ ಉಪಸ್ಥಿತಿಯಲ್ಲಿದ್ದು ಸರ್. ಎಂ.ವಿಶ್ವೇಶ್ವರಯ್ಯ ರವರ ಸಾಧನೆ ಎಲ್ಲರಿಗೂ ಮಾರ್ಗದರ್ಶಕ ಎಂದರು.
ಕಾಲೇಜಿನ ಸಂಚಾಲಕರಾದ ವಸಂತ ಕಾರಂದೂರ್ ಇಂತಹ ಕಾರ್ಯಕ್ರಮ ವಿದ್ಯಾರ್ಥಿಗಳ ಬದುಕಿಗೆ ಅತೀ ಮುಖ್ಯ ವೆಂದರು. ಕಾಲೇಜಿನ ಪ್ರಾಂಶುಪಾಲರಾದ ಡಾ. ಆಶಾಲತಾ ಎಸ್ ಸುವರ್ಣ ಅಧ್ಯಕ್ಷತೆಯನ್ನು ವಹಿಸಿದ್ದರು.
ಕನ್ನಡ ಉಪನ್ಯಾಸಕ ವಸಂತ್ ಕಾರ್ಯಕ್ರಮ ನಿರೂಪಿಸಿದರು. ಐಕ್ಯೂಎಸಿ ಸಂಯೋಜಕರಾದ ಯತೀನ್ ಅತಿಥಿ ಗಣ್ಯರನ್ನು ಸ್ವಾಗತಿಸಿದರು. ಕನ್ನಡ ಸಂಘದ ನಾಯಕ ರಾಜೇಶ್ ವಂದನಾರ್ಪಣೆಗೈದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಚಾನೆಲ್ ಫಾಲೋ ಮಾಡಲು ಈ ಲಿಂಕ್ ಕ್ಲಿಕ್ ಮಾಡಿ