ಪುತ್ತೂರು: ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಅಂತಿಮ ವರ್ಷದ ಎಂಬಿಎ ವಿಭಾಗದ ವಿದ್ಯಾರ್ಥಿನಿ ಪವಿತ್ರ.ಜಿ ರಾಜ್ಯ ಮಟ್ಟದ ಹಿರಿಯರ ಅಥ್ಲೆಟಿಕ್ ಸ್ಪರ್ಧೆ-2023 ಇದರಲ್ಲಿ ಟ್ರಿಪಲ್ ಜಂಪ್ ಸ್ಪರ್ಧೆಯಲ್ಲಿ ಚಿನ್ನದ ಪದಕ ಗೆದ್ದುಕೊಂಡಿದ್ದಾರೆ.
ಕರ್ನಾಟಕ ರಾಜ್ಯ ಅಥ್ಲೆಟಿಕ್ ಅಸೋಸಿಯೇಶನ್ ಇದರ ಆಶ್ರಯದಲ್ಲಿ ಬೆಂಗಳೂರಿನ ಶ್ರೀ ಕಂಠೀರವ ಕ್ರೀಡಾಂಗಣದಲ್ಲಿ ನಡೆದ ಈ ಸ್ಪರ್ಧೆಯಲ್ಲಿ 12.85 ಮೀಟರ್ ದೂರ ಜಿಗಿದು ಇವರು ಪ್ರಥಮ ಸ್ಥಾನವನ್ನು ಗಳಿಸಿಕೊಂಡಿದ್ದಾರೆ. ಈ ಸಾಧನೆಯೊಂದಿಗೆ ಇವರು ರಾಷ್ಟ್ರೀಯ ಹಿರಿಯರ ಅಥ್ಲೆಟಿಕ್ ಚಾಂಪಿಯನ್‌ಶಿಪ್‌ನಲ್ಲಿ ಭಾಗವಹಿಸುವ ಅರ್ಹತೆಯನ್ನು ಪಡೆದುಕೊಂಡಿದ್ದಾರೆ.
ಟ್ರಿಪಲ್‌ಜಂಪ್ ಸ್ಪರ್ಧೆಯಲ್ಲಿ ಇವರು ಅನೇಕ ಸಾಧನೆಗಳನ್ನು ಮಾಡಿದ್ದಾರೆ. ಚತ್ತೀಸ್‌ಘಡದ ಬಿಲಾಸ್‌ಪುರದಲ್ಲಿ ನಡೆದ 23ರ ಕೆಳಗಿನ ಹರೆಯದವರ ರಾಷ್ಟ್ರೀಯ ಅಥ್ಲೆಟಿಕ್ ಚಾಂಪಿಯನ್‌ಶಿಪ್‌ನಲ್ಲಿ ಬೆಳ್ಳಿಯ ಪದಕ, ರಾಜ್ಯ ಮಟ್ಟದ ದಸರಾ ಕ್ರೀಡಾಕೂಟದಲ್ಲಿ ನೂತನ ಕೂಟ ದಾಖಲೆಯೊಂದಿಗೆ ಚಿನ್ನದ ಪದಕ, ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವನಿದ್ಯಾನಿಲಯದ ರಾಜ್ಯಮಟ್ಟದ ಕ್ರೀಡಾಕೂಟದಲ್ಲಿ ನೂತನ ಕೂಟ ದಾಖಲೆಯೊಂದಿಗೆ ಉತ್ತಮ ಕ್ರೀಡಾಪಟು ಪ್ರಶಸ್ತಿ, ಬೆಂಗಳೂರಿನಲ್ಲಿ ನಡೆದ ಕರ್ನಾಟಕ ಅಥ್ಲೆಟಿಕ್ ಅಥ್ಲೆಟಿಕ್ ಚಾಂಪಿಯನ್‌ಶಿಪ್‌ನಲ್ಲಿ ನೂತನ ಕೂಟ ದಾಖಲೆಯೊಂದಿಗೆ ಚಿನ್ನದ ಪದಕವನ್ನು ಪಡೆದುಕೊಂಡಿದೆ.
ರಾಷ್ಟ್ರ ಮಟ್ಟದ ಹಿರಿಯರ ಕ್ರೀಡಾಕೂಟ ಹಾಗೂ ರಾಷ್ಟ್ರ ಮಟ್ಟದ ಮುಕ್ತ ಜಿಗಿತಗಳ ಕ್ರೀಡಾಕೂಟದಲ್ಲಿ ಭಾಗವಹಿಸಿದ್ದಾರೆ. ಇವರಿಗೆ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಬಾಲಚಂದ್ರ ಗೌಡ ಭಾರ್ತಿಕುಮೇರು ಮಾರ್ಗದರ್ಶನವನ್ನು ನೀಡಿದ್ದಾರೆ ಎಂದು ಪ್ರಾಂಶುಪಾಲ ಡಾ. ಮಹೇಶ್ ಪ್ರಸನ್ನ. ಕೆ ತಿಳಿಸಿದ್ದಾರೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಚಾನೆಲ್ ಫಾಲೋ ಮಾಡಲು ಈ ಲಿಂಕ್ ಕ್ಲಿಕ್ ಮಾಡಿ