ಮಂಗಳೂರು ಮಹಾನಗರ ಪಾಲಿಕೆಯ ನೂತನ ಮೇಯರ್ ಆಗಿ ಸುಧೀರ್ ಶೆಟ್ಟಿ ಕಣ್ಣೂರ್ ಆಯ್ಕೆ

Upayuktha
0


ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆಯ 24ನೇ ಮೇಯರ್ ಮತ್ತು ಬಿಜೆಪಿ ಆಡಳಿತದ 4ನೇ ಅವಧಿಗೆ ನೂತನ ಮೇಯರ್ ಆಗಿ ಕೊಡಿಯಾಲ್‌ಬೈಲ್ ವಾರ್ಡಿನ ಕಾರ್ಪೋರೇಟರ್ ಸುಧೀರ್ ಶೆಟ್ಟಿ ಕಣ್ಣೂರ್ ಅವರು ಮೇಯರ್ ಚುನಾವಣೆಯಲ್ಲಿ ಗೆದ್ದು ಆಯ್ಕೆಯಾಗಿದ್ದಾರೆ.


ಅವರಿಗೆ 47 ಮತಗಳು, ಅವರ ಪ್ರತಿಸ್ಪರ್ಧಿ ಕಾಂಗ್ರೆಸ್ ನಿಂದ ಸ್ಪರ್ಧಿಸಿದ್ದ ನವೀನ್ ಆರ್. ಡಿಸೋಜಾ ಅವರಿಗೆ 14 ಮತಗಳು ಚಲಾವಣೆಯಾಗಿದ್ದವು. ಒಟ್ಟು 60 ಸ್ಥಾನಗಳ ಪೈಕಿ, ಇಬ್ಬರು ಸದಸ್ಯರುಗಳ ಬಲವುಳ್ಳ ಎಸ್‌ಡಿಪಿಐ ತಟಸ್ಥವಾಗಿ ಉಳಿದಿತ್ತು.


ಉಪ ಮೇಯರ್ ಆಗಿ ಪಾಲಿಕೆಯ ಏಕೈಕ ಪರಿಶಿಷ್ಟ ಮಹಿಳಾ ಅಭ್ಯರ್ಥಿ, ಪಣಂಬೂರು ವಾರ್ಡ್ ನ ಕಾರ್ಪೋರೇಟರ್ ಸುನೀತಾ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.


ಮಂಗಳ ಸಭಾಂಗಣದಲ್ಲಿ ನಡೆದ ಮೇಯರ್ ಚುನಾವಣೆ ಪ್ರಕ್ರಿಯೆಯಲ್ಲಿ ಮೈಸೂರು ಉಪ ವಿಭಾಗದ ಪ್ರಾದೇಶಿಕ ಆಯುಕ್ತ ಡಾ. ಜಿ.ಸಿ. ಪ್ರಕಾಶ್ ಅವರು ಚುನಾವಣಾಧಿಕಾರಿಯಾಗಿ ಭಾಗವಹಿಸಿದ್ದರು. ಚುನಾವಣೆಯಲ್ಲಿ ಭಾಗವಹಿಸಿದ್ದ ಬಿಜೆಪಿ ರಾಜ್ಯಾಧ್ಯಕ್ಷ, ಸಂಸದ ನಳಿನ್ ಕುಮಾರ್ ಕಟೀಲ್, ಶಾಸಕರಾದ ವೇದವ್ಯಾಸ ಕಾಮತ್ ಮತ್ತು ಡಾ. ಭರತ್ ಶೆಟ್ಟಿ ವೈ ಅವರು ಬಿಜೆಪಿ ಪರ ಮತ ಚಲಾಯಿಸಿದ್ದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter 


إرسال تعليق

0 تعليقات
إرسال تعليق (0)
Mandovi Motors Presents MONSOON BONANZA
Mandovi Motors Presents MONSOON BONANZA
To Top