ಗೋವಿಂದದಾಸ ಕಾಲೇಜಿನಲ್ಲಿ ಹಿಂದಿ ದಿವಸ್ ಆಚರಣೆ

Upayuktha
0


ಸುರತ್ಕಲ್: ಸ್ವಾತಂತ್ರ್ಯ ಸಂಗ್ರಾಮದ ಕಾಲದಲ್ಲಿ ಹಿಂದಿ ಭಾಷೆಯು ಪ್ರಮುಖ ಪಾತ್ರ ವಹಿಸಿತು. ಪ್ರತಿಯೊಬ್ಬರು ಹಿಂದಿ ಭಾಷೆಯನ್ನು ಪ್ರೀತಿಸಿ ಗೌರವಿಸಬೇಕು ಎಂದು ಗೋವಿಂದ ದಾಸ ಕಾಲೇಜಿನ ಪ್ರಾಚಾರ್ಯ ಪ್ರೊ. ಪಿ. ಕೃಷ್ಣಮೂರ್ತಿ ನುಡಿದರು. ಅವರು ಕಾಲೇಜಿನ ಹಿಂದಿ ವಿಭಾಗವು ಆಚರಿಸಿದ ರಾಷ್ಟ್ರೀಯ ಹಿಂದಿ ದಿವಸ್ ಉದ್ಘಾಟಿಸಿ ಮಾತನಾಡಿದರು. ಹಿಂದಿ ವಿಭಾಗದ ಮುಖ್ಯಸ್ಥೆ ಜ್ಯೋತಿ ಕಾಮತ್ ಅವರು ಹಿಂದಿ ದಿನದ ಮಹತ್ವದ ಬಗ್ಗೆ ಮಾಹಿತಿ ನೀಡಿದರು.


ಆಂಗ್ಲ ಭಾಷಾ ವಿಭಾಗದ ಮುಖ್ಯಸ್ಥ ಪ್ರೊ. ಕುಮಾರ ಮಾದರ ಅವರು ಹಿಂದಿ ಪ್ರಾಚೀನ ಮತ್ತು ಸರಳ ಭಾಷೆಯಾಗಿದ್ದು ಈ ಭಷೆಯನ್ನು ಇನ್ನೂ ಸಮೃದ್ಧವಾಗಿ ಬೆಳೆಯುವಂತೆ ಯುವಜನರು ಪ್ರಯತ್ನಿಸಬೇಕೆಂದರು. ಕಾರ್ಯಕ್ರಮದಲ್ಲಿ ಪ್ರಾಧ್ಯಾಪಕರಾದ ದೀಪಾ ಶೆಟ್ಟಿ, ಶರ್ಮಿತಾ ಯು., ಆಶ್ವಿನ್, ರಶ್ಮಿ ಕಾಯರ್‍ಮಾರ್, ದೈಹಿಕ ಶಿಕ್ಷಣ ನಿರ್ದೇಶಕರಾದ ಡಾ. ಪ್ರಶಾಂತ್ ಎಂ.ಡಿ. ಉಪಸ್ಥಿತರಿದ್ದರು. ಹಿಂದಿ ಪ್ರಾಧ್ಯಾಪಕಿ ರಮಿತಾ ಸ್ವಾಗತಿಸಿ ಶ್ರಾವ್ಯ ವಂದಿಸಿದರು. ಜುವೈರಿಯಾ ನಾಸಿರಾ ನಿರೂಪಿಸಿದರು.


 ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter   

إرسال تعليق

0 تعليقات
إرسال تعليق (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top