ಮಂಗಳೂರು: ಶಿಕ್ಷಕರ ದಿನಾಚರಣೆಯ ಅಂಗವಾಗಿ ಉತ್ತರ ವಲಯವನ್ನು ಪ್ರತಿನಿಧೀಕರಿಸಿ ಮುಲ್ಲಕಾಡು ಸರಕಾರಿ ಪ್ರೌಢಶಾಲೆ ಹಾಗೂ ಹಿರಿಯ ಪ್ರಾಥಮಿಕ ಶಾಲೆಯ ಅಧ್ಯಾಪಕ- ಅಧ್ಯಾಪಿಕೆಯರಿಂದ ವಿವಿಧ ಸಾಂಸ್ಕೃತಿಕ ಮನೋರಂಜನಾ ಕಾರ್ಯಕ್ರಮಗಳು ಪ್ರದರ್ಶಿಸಲ್ಪಟ್ಟು ಶಿಕ್ಷಣ ಗಡಣವನ್ನು ಹರ್ಷಗೊಳಿಸಿತು. ಅದರಲ್ಲೂ ವಿಶೇಷವಾಗಿ ಅಧ್ಯಾಪಕ ನಾಗರಾಜ ಖಾರ್ವಿಯವರ ಏಕ ವ್ಯಕ್ತಿ ಯಕ್ಷಗಾನ ಉತ್ತಮವಾಗಿ ಮೂಡಿಬಂತು.
ಉತ್ತರ ವಲಯ ಶಿಕ್ಷಣಾಧಿಕಾರಿ ಜೇಮ್ಸ್ ಹಾಗೂ ಶ್ರೀರಾಮಕೃಷ್ಣ ಕಾಲೇಜಿನ ಪ್ರಾಂಶುಪಾಲ ಬಾಲಕೃಷ್ಣ ಶೆಟ್ಟಿ ಮತ್ತು ಅನ್ಯಾನ್ಯ ಶಾಲೆಗಳ ಶಿಕ್ಷಕವರ್ಗ ಈ ಕಾರ್ಯಕ್ರಮಗಳನ್ನು ಕಣ್ತುಂಬಿಕೊಂಡರು. ಮಂಗಳೂರಿನ ಪುರಭವನದಲ್ಲಿ ಜರಗಿದ ಈ ಕಾರ್ಯಕ್ರಮದ ಸಭಾಕಾರ್ಯಕ್ರಮದಲ್ಲಿ ಉಭಯ ದಕ್ಷಿಣ ಹಾಗೂ ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕರು ಭಾಗವಹಿಸಿ ಕಾರ್ಯಕ್ರಮವನ್ನು ಸಂಪನ್ನಗೊಳಿಸಿದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ