ತೆಂಕನಿಡಿಯೂರು ಕಾಲೇಜಿನಲ್ಲಿ ವಿಶ್ವ ಪ್ರಜಾಪ್ರಭುತ್ವ ದಿನಾಚರಣೆ

Upayuktha
0


ತೆಂಕನಿಡಿಯೂರು: ಸರಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರ ತೆಂಕನಿಡಿಯೂರು, ಉಡುಪಿ ಇಲ್ಲಿನ ಐ.ಕ್ಯೂ.ಎ.ಸಿ. ಹಾಗೂ ರಾಜ್ಯಶಾಸ್ತ್ರ ವಿಭಾಗದ ಆಶ್ರಯದಲ್ಲಿ ವಿಶ್ವ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಸಂವಿಧಾನ ಪೀಠಿಕೆಯ ಪ್ರತಿಜ್ಞಾ ವಿಧಿಯನ್ನು ಬೋಧಿಸಲಾಯಿತು.  ಪ್ರತಿಜ್ಞಾ ವಿಧಿ ಬೋಧಿಸಿದ ಪ್ರಾಂಶುಪಾಲ ಪ್ರೊ. ಸುರೇಶ್ ರೈ ಕೆ. ಸಂವಿಧಾನ ಸರ್ವರ ಏಳಿಗೆಯ ಭವ್ಯ ಭಾರತದ ಸಂಕಲ್ಪ ಹೊಂದಿರುವ ಪವಿತ್ರ ಗ್ರಂಥ ಇದನ್ನು ಅರ್ಥೈಸಿಕೊಂಡು ಸಂವಿಧಾನದ ತಾತ್ವಿಕ ಮೌಲ್ಯಗಳನ್ನು ನಿಜ ಜೀವನದಲ್ಲಿ ಅಳವಡಿಕೊಳ್ಳಬೇಕು ಮತ್ತು ಪೌರತ್ವದ ಜವಾಬ್ದಾರಿಗಳನ್ನು ನಿರ್ವಹಿಸಬೇಕು. ಸಂವಿಧಾನದ ಆಶಯ ಬಹಳ ಮುಖ್ಯವಾಗಿ ಯುವ ಜನತೆಗೆ ತಲುಪುವಂತಾಗಬೇಕು.  ಯುವ ಜನತೆ ಸಂವಿಧಾನದ ಆಶಯಗಳನ್ನು ನಾಗರಿಕ ಜವಾಬ್ದಾರಿಗಳನ್ನು ನಿರ್ವಹಿಸಿದ್ದಲ್ಲಿ ನಮ್ಮ ಪ್ರಜಾ ಪ್ರಭುತ್ವದ ಬೇರುಗಳು ಇನ್ನಷ್ಟು ಗಟ್ಟಿಯಾಗಲಿದೆ ಎಂದರು. 


ರಾಜಕೀಯಶಾಸ್ತ್ರ ವಿಭಾಗ ಮುಖ್ಯಸ್ಥ ಶ್ರೀ ಪ್ರಶಾಂತ್ ನೀಲಾವರ ಕಾರ್ಯಕ್ರಮದ ಔಚಿತ್ಯ ಮತ್ತು ಸಂವಿಧಾನದ ಮಹತ್ವವನ್ನು ಪ್ರಾಸ್ತಾವಿಕ ಮಾತುಗಳಲ್ಲಿ ತಿಳಿಸಿದರೆ ವಿದ್ಯಾರ್ಥಿ ಭಾರ್ಗವ ಸಂವಿಧಾನದ ಪ್ರಸ್ತಾವನೆಯ ಮಹತ್ವವನ್ನು ತಿಳಿಸಿದರು.  ಕಾಲೇಜಿನ ಬೋಧಕ/ಬೋಧಕೇತರರು ಹಾಗೂ ಸರ್ವ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗಿಯಾದರು.


 ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter 

Post a Comment

0 Comments
Post a Comment (0)
Maruti Suzuki Festival of Colours
Maruti Suzuki Festival of Colours
To Top