ಥ್ರೋಬಾಲ್ ಪಂದ್ಯಾಟ: ವಿವೇಕಾನಂದ ಪ.ಪೂ ಕಾಲೇಜಿನ ಬಾಲಕರ ಮತ್ತು ಬಾಲಕಿಯರ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ

Upayuktha
0


ಪುತ್ತೂರು: ಪದವಿ ಪೂರ್ವ ಶಿಕ್ಷಣ ಇಲಾಖೆ ವತಿಯಿಂದ ಕಬಕ ಸರಕಾರಿ ಪದವಿ ಪೂರ್ವ ಕಾಲೇಜಿನ ಸಹಭಾಗಿತ್ವದಲ್ಲಿ ನಡೆದ ತಾಲೂಕು ಮಟ್ಟದ ತ್ರೋಬಾಲ್ ಪಂದ್ಯಾಟದಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಾಲಕರ ಮತ್ತು ಬಾಲಕಿಯರ ತಂಡ ಪ್ರಥಮ ಸ್ಥಾನವನ್ನು ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದೆ.


ಬಾಲಕರ ವಿಭಾಗದಲ್ಲಿ ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದ ಶರತ್ ಶೆಟ್ಟಿ ಮೋಕ್ಷಿತ್ ಪಿ ಶೆಟ್ಟಿ, ಕೌಶಿಕ್, ಪ್ರಥಮ ಪಿಯುಸಿ ವಾಣಿಜ್ಯ ವಿಭಾಗದ ಪ್ರಜ್ವಲ್, ಗಗನ್, ಪ್ರಜ್ವಲ್, ಕಲಾ ವಿಭಾಗದ ಶಮಿತ್ ಪ್ರಸಾದ್ ಪಿ, ವಿಜ್ಞಾನ ವಿಭಾಗದ ಸುಜಿತ್, ರೋಶಿತ್ ಆರ್, ಲಕ್ಷ್ಮೀದಾಸ್ ಎನ್, ಸುಚಿತ್, ಜೀವನ್ ಕುಮಾರ್, ಭಾರ್ಗವ್ ಎಸ್ ಭಾಗವಹಿಸಿದ್ದರು.


ಬಾಲಕಿಯರ ವಿಭಾಗದಲ್ಲಿ ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದ ಶ್ರೇಯಾ, ಮಾನ್ಯ ಶೆಟ್ಟಿ, ವರ್ಷಿಣಿ, ತೃಪ್ತಿ ಕೆ, ಕಲಾ ವಿಭಾಗದ ಕೀರ್ತಿಲತಾ ಬಿ ಎಲ್, ವಿಜ್ಞಾನ ವಿಭಾಗದ ಪುಣ್ಯಶ್ರೀ ವಿ ಕೆ, ಪ್ರಥಮ ಪಿಯುಸಿ ವಾಣಿಜ್ಯ ವಿಭಾಗದ ಮಿಥಾಲಿ, ಹಿತೈಷಿ ಬಿ ಕೆ, ಜಸ್ಮಿತಾ, ವಿಜ್ಞಾನ ವಿಭಾಗದ ಪ್ರತೀಕ್ಷಾ ಎಂ,  ಸ್ವಾತಿ ಬಿ ಕೆ ಭಾಗವಹಿಸಿದ್ದರು. ಈ ತಂಡವು ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ರವಿಶಂಕರ್, ಡಾ. ಜ್ಯೋತಿ ಮತ್ತು ಯತೀಶ್ ಇವರ ನೇತೃತ್ವದಲ್ಲಿ ತರಬೇತಿಯನ್ನು ಪಡೆದಿರುತ್ತಾರೆ. ವಿದ್ಯಾರ್ಥಿಗಳ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಅಧ್ಯಾಪಕ ಮತ್ತು ಅಧ್ಯಾಪಕೇತರ ವೃಂದ ಅಭಿನಂದಿಸಿದ್ದಾರೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter 

Post a Comment

0 Comments
Post a Comment (0)
To Top