ಉಡುಪಿ ಜಿಲ್ಲಾ ಮಟ್ಟದ ಅಂಚೆ ಚೀಟಿ ಪ್ರದರ್ಶನ : ಅರ್ಜಿ ಆಹ್ವಾನ

Upayuktha
0


ಉಡುಪಿ: ಉಡುಪಿ ಅಂಚೆ ವಿಭಾಗದ ವತಿಯಿಂದ ನವೆಂಬರ್ 18 ಮತ್ತು 19 ರಂದು ಜಿಲ್ಲಾ ಮಟ್ಟದ ಅಂಚೆ ಚೀಟಿ ಪ್ರದರ್ಶನ ಕೃಷ್ಣಪೆಕ್ಸ್ - 2023 ಆಯೋಜಿಸಿದ್ದು, ಈ ಸಂಬಂಧ ಕೃಷ್ಣಪೆಕ್ಸ್ 2023 ಲಾಂಛನವನ್ನು ಅನಾವರಣಗೊಳಿಸಿದ್ದು, ಜಿಲ್ಲೆಯಲ್ಲಿರುವ ಅಂಚೆ ಚೀಟಿ ಪ್ರದರ್ಶನಕಾರರಿಗೆ ಅಂಚೆ ಚೀಟಿ ಪ್ರದರ್ಶನ ಸ್ಪರ್ಧೆಯಲ್ಲಿ ಭಾಗವಹಿಸಲು ಅವಕಾಶ ನೀಡಲಾಗಿದ್ದು,  ಇಪ್ಪತ್ತು ವರ್ಷ ಮೇಲ್ಪಟ್ಟ ಹಿರಿಯರು ಹಾಗೂ ಇಪ್ಪತ್ತು ವರ್ಷಕ್ಕಿಂತ ಕಡಿಮೆ ವಯಸ್ಸಿನ ಕಿರಿಯರಿಗೆ ಎಂಬ ಎರಡು ವಿಭಾಗದಲ್ಲಿ ಸ್ಪರ್ಧೆ ನಡೆಯಲಿದ್ದು, ಸ್ಪರ್ಧೆಯಲ್ಲಿ ಭಾಗವಹಿಸಲು ಇಚ್ಛಿಸುವ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ. 

  

ಅರ್ಜಿ ಸಲ್ಲಿಸಲು ಅಕ್ಟೋಬರ್ 10 ಕೊನೆಯ ದಿನ. ಆಸಕ್ತರು ಹೆಚ್ಚಿನ ಮಾಹಿತಿಗಾಗಿ ಅಂಚೆ ಅಧೀಕ್ಷಕರ ಕಚೇರಿ, ಅಂಚೆ ವಿಭಾಗ, ಉಡುಪಿ ಮೊ.ನಂ: 9449332706 ನ್ನು ಸಂಪರ್ಕಿಸಬಹುದಾಗಿದೆ ಎಂದು ಉಡುಪಿ ಅಂಚೆ ವಿಭಾಗದ ಅಂಚೆ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


 ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಚಾನೆಲ್ ಫಾಲೋ ಮಾಡಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top