ಉಡುಪಿ: ಮೈಸೂರು ವಿಭಾಗ ಮಟ್ಟದ ದಸರಾ ಕ್ರೀಡಾಕೂಟ

Upayuktha
0


  

ಉಡುಪಿ: ಕರ್ನಾಟಕ ಕ್ರೀಡಾ ಪ್ರಾಧಿಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಉಡುಪಿ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ಮೈಸೂರು ವಿಭಾಗ ಮಟ್ಟದ ದಸರಾ ಕ್ರೀಡಾಕೂಟವು ಅಕ್ಟೋಬರ್ 1 ಮತ್ತು 2 ರಂದು ನಗರದ ಅಜ್ಜರಕಾಡು ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿದೆ.


ಅಕ್ಟೋಬರ್ 2 ರಂದು ಬೆಳಗ್ಗೆ 9 ಗಂಟೆಗೆ ಅಜ್ಜರಕಾಡಿನ ಜಿಲ್ಲಾ ಈಜುಕೊಳ ಇಲ್ಲಿ ಕಾರ್ಯಕ್ರಮವನ್ನು ರಾಜ್ಯದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಆರ್. ಹೆಬ್ಬಾಳ್ಕರ್ ಉದ್ಘಾಟಿಸಲಿದ್ದು, ಶಾಸಕ ಯಶ್‍ಪಾಲ್ ಎ ಸುವರ್ಣ ಅಧ್ಯಕ್ಷತೆ ವಹಿಸಲಿದ್ದಾರೆ.

 

ಕೇಂದ್ರ ಕೃಷಿ ಹಾಗೂ ರೈತರ ಕಲ್ಯಾಣ ರಾಜ್ಯ ಖಾತೆ ಸಚಿವೆ ಶೋಭಾ ಕರಂದ್ಲಾಜೆ, ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಕೆ.ಜಯಪ್ರಕಾಶ್ ಹೆಗ್ಡೆ, ಸಂಸದ ಬಿ.ವೈ.ರಾಘವೇಂದ್ರ, ಶಾಸಕರುಗಳಾದ ವಿ ಸುನಿಲ್ ಕುಮಾರ್, ಗುರುರಾಜ್ ಶೆಟ್ಟಿ ಗಂಟಿಹೊಳೆ, ಎ ಕಿರಣ್ ಕುಮಾರ್ ಕೊಡ್ಗಿ ಹಾಗೂ ಗುರ್ಮೆ ಸುರೇಶ್ ಶೆಟ್ಟಿ, ವಿಧಾನಪರಿಷತ್ ಶಾಸಕರುಗಳಾದ ಕೋಟ ಶ್ರೀನಿವಾಸ ಪೂಜಾರಿ, ಎಸ್.ಎಲ್.ಭೋಜೆಗೌಡ, ಡಾ.ತೇಜಸ್ವಿನಿ ಗೌಡ ಹಾಗೂ ಮಂಜುನಾಥ ಭಂಡಾರಿ, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ. ಎಂ.ಟಿ ರೇಜು, ಯುವ ಸಬಲೀಕರಣ ಮತ್ತು ಕ್ರೀಡಾ ಹಾಗೂ ಸಹಕಾರ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿ ಡಾ. ಎನ್ ಮಂಜುನಾಥ ಪ್ರಸಾದ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಆಯುಕ್ತ ಎನ್ ಶಶಿಕುಮಾರ್ ಹಾಗೂ ಮತ್ತಿತರರು ಭಾಗವಹಿಸಲಿದ್ದಾರೆ.  


 ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಚಾನೆಲ್ ಫಾಲೋ ಮಾಡಲು ಈ ಲಿಂಕ್ ಕ್ಲಿಕ್ ಮಾಡಿ


web counter  

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top