ಸೆ. 6 ರಂದು ಶ್ರೀಕೃಷ್ಣ ಜಯಂತಿ

Upayuktha
0

 


ಉಡುಪಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಜಿಲ್ಲೆ ಇವರ ವತಿಯಿಂದ ಶ್ರೀ ಕೃಷ್ಣ ಜಯಂತಿ ಆಚರಣೆಯು ಸೆಪ್ಟಂಬರ್ 6 ರಂದು ಬೆಳಗ್ಗೆ 10.30 ಕ್ಕೆ ನಗರದ ವಳಕಾಡು ಸರಕಾರಿ ಪ್ರೌಢಶಾಲೆಯಲ್ಲಿ ನಡೆಯಲಿದೆ.


ಕಾರ್ಯಕ್ರಮವನ್ನು ರಾಜ್ಯದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಆರ್. ಹೆಬ್ಬಾಳ್ಕರ್ ಉದ್ಘಾಟಿಸಲಿದ್ದು, ಶಾಸಕ ಯಶ್‍ಪಾಲ್ ಎ ಸುವರ್ಣ ಅಧ್ಯಕ್ಷತೆ ವಹಿಸಲಿದ್ದಾರೆ.


ಕೇಂದ್ರ ಕೃಷಿ ಹಾಗೂ ರೈತರ ಕಲ್ಯಾಣ ರಾಜ್ಯ ಖಾತೆ ಸಚಿವೆ ಶೋಭಾ ಕರಂದ್ಲಾಜೆ, ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಕೆ.ಜಯಪ್ರಕಾಶ್ ಹೆಗ್ಡೆ, ಸಂಸದ ಬಿ.ವೈ.ರಾಘವೇಂದ್ರ, ಶಾಸಕರುಗಳಾದ ವಿ ಸುನಿಲ್ ಕುಮಾರ್, ಗುರುರಾಜ್ ಗಂಟಿಹೊಳೆ, ಎ ಕಿರಣ್ ಕುಮಾರ್ ಕೊಡ್ಗಿ ಹಾಗೂ ಗುರ್ಮೆ ಸುರೇಶ್ ಶೆಟ್ಟಿ, ವಿಧಾನಪರಿಷತ್ ಶಾಸಕರುಗಳಾದ ಕೋಟ ಶ್ರೀನಿವಾಸ ಪೂಜಾರಿ, ಮಂಜುನಾಥ ಭಂಡಾರಿ, ಎಸ್.ಎಲ್.ಭೋಜೆಗೌಡ ಹಾಗೂ ಡಾ.ತೇಜಸ್ವಿನಿ ಗೌಡ, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ. ಎಂ.ಟಿ ರೇಜು, ಜಿಲ್ಲಾ ಯಾದವ ಗೊಲ್ಲ ಸಮಾಜ ಸಂಘದ ಅಧ್ಯಕ್ಷ ದಯಾನಂದ ಬಿ.ಆರ್, ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಅಧ್ಯಕ್ಷ ನೀಲಾವರ ಸುರೇಂದ್ರ ಅಡಿಗ, ವಳಕಾಡು ಸರಕಾರಿ ಪ್ರೌಢಶಾಲೆಯ ಮುಖ್ಯೋಪಾಧ್ಯಾಯಿನಿ ನಿರ್ಮಲಾ ಹಾಗೂ ಮತ್ತಿತರರು ಭಾಗವಹಿಸಲಿದ್ದು, ಸಾಹಿತಿ ಡಾ. ಕಾತ್ಯಾಯಿನಿ ಕುಂಜಿಬೆಟ್ಟು ಉಪನ್ಯಾಸ ನೀಡಲಿದ್ದಾರೆ.  


  ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top