ಉಡುಪಿ: ಮಹಾತ್ಮಗಾಂಧೀಜಿಯವರ ಜನ್ಮದಿನದ ಸ್ಮರಣಾರ್ಥವಾಗಿ ಅಕ್ಟೋಬರ್ 2 ರಂದು ಸ್ವಚ್ಛ ಭಾರತ ದಿನವನ್ನಾಗಿ ಆಚರಿಸಲಾಗುತ್ತಿದ್ದು, ಸೆಪ್ಟಂಬರ್ 15 ರಿಂದ ಅಕ್ಟೋಬರ್ 2 ರ ವರೆಗೆ ಸ್ವಚ್ಛತಾ ಹೀ ಸೇವಾ ಎಂಬ ಸ್ವಚ್ಛತಾ ಅಭಿಯಾನ ಕಾರ್ಯಕ್ರಮ ನಡೆಸಲಾಗುತ್ತಿದೆ.
ಇದರ ಅಂಗವಾಗಿ ಅಕ್ಟೋಬರ್ 1 ರಂದು ಜಿಲ್ಲೆಯಾದ್ಯಂತ ಎಲ್ಲಾ ಗ್ರಾಮ ಪಂಚಾಯತ್‌ಗಳಲ್ಲಿ ಬೆಳಗ್ಗೆ 10 ಘಂಟೆಯಿಂದ ಕನಿಷ್ಠ ಒಂದು ಗಂಟೆಯ ಕಾಲ ಸ್ವಚ್ಛತಾ ಶ್ರಮದಾನ ಕಾರ್ಯಕ್ರಮ ಆಯೋಜಿಸಲಾಗುತ್ತಿದ್ದು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಹಾಗೂ ಹೆಚ್ಚಿನ ಮಾಹಿತಿಗಾಗಿ https://swachhatahiseva.com ಪೋರ್ಟಲ್ ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಸನ್ನ ಹೆಚ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಚಾನೆಲ್ ಫಾಲೋ ಮಾಡಲು ಈ ಲಿಂಕ್ ಕ್ಲಿಕ್ ಮಾಡಿ


