ಉಡುಪಿ: ತಾಲೂಕು ಮಟ್ಟದ ದಸರಾ ಕ್ರೀಡಾಕೂಟ

Upayuktha
0

ಉಡುಪಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಉಡುಪಿ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ಪ್ರಸಕ್ತ ಸಾಲಿನಲ್ಲಿ ಉಡುಪಿ ತಾಲೂಕು ಮಟ್ಟದ ದಸರಾ ಕ್ರೀಡಾಕೂಟವು ಸೆಪ್ಟಂಬರ್ 12 ರಂದು ನಗರದ ಅಜ್ಜರಕಾಡು ಮಹಾತ್ಮಾಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿದ್ದು, ಭಾಗವಹಿಸುವ ಸ್ಪರ್ಧಿಗಳು ಬೆಳಗ್ಗೆ 9 ಗಂಟೆಯ ಒಳಗಾಗಿ ಸಂಘಟಕರಲ್ಲಿ ವರದಿ ಮಾಡಿಕೊಳ್ಳಬಹುದಾಗಿದೆ.


ಸ್ಪರ್ಧೆಗಳ ವಿವರ: ಪುರುಷ ಹಾಗೂ ಮಹಿಳೆಯರಿಗೆ ಅಥ್ಲೆಟಿಕ್ಸ್ ಸ್ಫರ್ಧೆಗಳು, ಪುರುಷರಿಗೆ ಗುಂಪು ಆಟಗಳಾದ ವಾಲಿಬಾಲ್, ಖೋ-ಖೋ, ಕಬಡ್ಡಿ, ಫುಟ್‍ಬಾಲ್, ಥ್ರೋಬಾಲ್, ಯೋಗ ಹಾಗೂ ಮಹಿಳೆಯರಿಗೆ ವಾಲಿಬಾಲ್, ಖೋ-ಖೋ, ಕಬಡ್ಡಿ, ಥ್ರೋಬಾಲ್ ಹಾಗೂ ಯೋಗ ಸ್ಪರ್ಧೆಗಳು ನಡೆಯಲಿದೆ.


ತಾಲೂಕು ಮಟ್ಟದ ದಸರಾ ಕ್ರೀಡಾಕೂಟದ ವೈಯಕ್ತಿಕ ಸ್ಪರ್ಧೆಯಲ್ಲಿ ಪ್ರಥಮ ಮತ್ತು ದ್ವಿತೀಯ ಹಾಗೂ ಗುಂಪು ಕ್ರೀಡೆಯಲ್ಲಿ ಪ್ರಥಮ ಸ್ಥಾನ ಪಡೆದ ತಂಡವು ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟದಲ್ಲಿ ಭಾಗವಹಿಸಲು ಅರ್ಹತೆ ಪಡೆಯುತ್ತಾರೆ.


ಕ್ರೀಡಾಕೂಟಕ್ಕೆ ಹೆಸರು ಹಾಗೂ ತಂಡಗಳನ್ನು ನೋಂದಾಯಿಸಲು ಸೆಪ್ಟಂಬರ್ 8 ಕೊನೆಯ ದಿನವಾಗಿದ್ದು, ಕ್ರೀಡಾಕೂಟ ನಡೆಯುವ ದಿನದಂದು ನೋಂದಾವಣೆಗೆ ಅವಕಾಶ ಇರುವುದಿಲ್ಲ. ಸೆ. 9 ರಂದು ಫುಟ್‍ಬಾಲ್ ಸ್ಪರ್ಧೆಯು ಎಂ.ಜೆ.ಸಿ ಕ್ರೀಡಾಂಗಣದಲ್ಲಿ ಹಾಗೂ ಸೆ. 10 ರಂದು ಬ್ರಹ್ಮಾವರದ ಸ.ಪ.ಪೂ ಕಾಲೇಜಿನಲ್ಲಿ ಖೋ-ಖೋ ಸ್ಪರ್ಧೆಗಳು ನಡೆಯಲಿದೆ.


ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಉಡುಪಿ ದೂ.ಸಂಖ್ಯೆ: 0820-2521324, ಮೊ.ನಂ: 9480886467 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.


  ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter

Post a Comment

0 Comments
Post a Comment (0)
Best Summer Deals Marvellous May Offers at Mandovi Motors
Best Summer Deals Marvellous May Offers at Mandovi Motors
To Top