ಉಜಿರೆ: ಎಸ್‌ಡಿಎಂ ಕಾಲೇಜಿನ ಪತ್ರಿಕೋದ್ಯಮ ವಿಭಾಗ ಹಾಗೂ ಉಪ್ಪಿನಂಗಡಿಯ ಪೂರ್ವಿ ಪ್ರೊಡಕ್ಷನ್ಸ್ ಜಂಟಿ ಸಹಯೋಗದಲ್ಲಿ ಶ್ರೀಮತಿ ಪೂರ್ಣಿಮಾ ರವಿ ನಿರ್ದೇಶಿಸಿರುವ ದೇವದಾಸಿಯರ ಕುರಿತ ಸಾಕ್ಷ್ಯಚಿತ್ರ- 'ಗಾಡ್ಸ್ ವೈವ್ಸ್ ಮೆನ್ಸ್ ಸ್ಲೇವ್ಸ್' ಭಾನುವಾರ ಬಿಡುಗಡೆಯಾಗಲಿದೆ.
ಕಾಲೇಜಿನ ಸೆಮಿನಾರ್ ಹಾಲ್‌ನಲ್ಲಿ ಅ.1ರಂದು ಬೆಳಗ್ಗೆ 9:30ರಿಂದ ಮಧ್ಯಾಹ್ನ 1 ಗಂಟೆಯ ವರೆಗೆ ನಡೆಯುವ ಕಾರ್ಯಕ್ರಮದಲ್ಲಿ ಈ ಸಾಕ್ಷ್ಯಚಿತ್ರ ಬಿಡುಗಡೆಯಾಗಲಿದೆ.
ಮಣಿಪಾಲದ ಮಾಹೆಯ ಗಾಂಧಿಯನ್ ಇನ್‌ಸ್ಟಿಟ್ಯೂಟ್ ಫಾರ್ ಫಿಲಾಸಾಫಿಕಲ್ ಆರ್ಟ್ಸ್ & ಸೈನ್ಸಸ್ ನಿರ್ದೇಶಕ ಪ್ರೊ. ವರದೇಶ್ ಹಿರೇಗಂಗೆ ಕಾರ್ಯಕ್ರಮ ಉದ್ಘಾಟಿಸಲಿದ್ದು, ಶ್ರೀ ಧ.ಮಂ ಕಾಲೇಜಿನ ಪ್ರಾಂಶುಪಾಲರಾದ ಡಾ. ಬಿ.ಎ ಕುಮಾರ್ ಹೆಗ್ಡೆ ಅಧ್ಯಕ್ಷತೆ ವಹಿಸಲಿದ್ದಾರೆ.
ಅತಿಥಿಗಳಾಗಿ ಹಂಪಿ ಕನ್ನಡ ವಿಶ್ವವಿದ್ಯಾನಿಲಯದ ಮಾನವ ಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಡಾ. ತಾರೀಹಳ್ಳಿ ಹನುಮಂತಪ್ಪ, ಹೊಸಪೇಟೆ ವಿಜಯನಗರ ಮಹಾವಿದ್ಯಾಲಯದ ವಿಶ್ರಾಂತ ಇತಿಹಾಸ ಪ್ರಾಧ್ಯಾಪಕ ಡಾ. ಎಚ್.ಎಂ ಚಂದ್ರಶೇಖರ ಶಾಸ್ತ್ರಿ ಹಾಗೂ ಕರ್ನಾಟಕ ರಾಜ್ಯ ದೇವದಾಸಿಯರ ವಿಮೋಚನಾ ಸಂಘದ ಅಧ್ಯಕ್ಷೆ ಟಿ.ವಿ. ರೇಣುಕಮ್ಮ ಭಾಗವಹಿಸಲಿದ್ದಾರೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಚಾನೆಲ್ ಫಾಲೋ ಮಾಡಲು ಈ ಲಿಂಕ್ ಕ್ಲಿಕ್ ಮಾಡಿ