ಎಸ್‌ಡಿಎಂ ಕಾಲೇಜಿನಲ್ಲಿ ರಾಜ್ಯಶಾಸ್ತ್ರ ವಿಭಾಗದ ಕಾರ್ಯ ಚಟುವಟಿಕೆಗಳ ಉದ್ಘಾಟನೆ

Upayuktha
0



ಉಜಿರೆ: ರಾಜಕೀಯ ಎಂದರೆ ಕೇವಲ ಪರ ವಿರೋಧಗಳು ಮಾತ್ರವಲ್ಲ, ಇದು ಜನಸಾಮಾನ್ಯರ ಅಶೋತ್ತರಗಳನ್ನು ಈಡೇರಿಸುವ ಒಂದು ಕಾರ್ಯಚಟುವಟಿಕೆಯೆಂದು ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಕೆ. ಎನ್ ಜನಾರ್ಧನ್ ಹೇಳಿದರು.


ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಯತ್ತ ಮಹಾವಿದ್ಯಾಲಯದಲ್ಲಿ ಸೆಪ್ಟೆಂಬರ್ 4ರಂದು ನಡೆದ ರಾಜ್ಯಶಾಸ್ತ್ರ ವಿಭಾಗದ ಕಾರ್ಯಚಟುವಟಿಕೆಗಳ ಉದ್ಘಾಟನಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.


ವಿದ್ಯಾರ್ಥಿಗಳು ಸಂಸತ್ತಿನ ಕಾರ್ಯಕಲಾಪಗಳ ಬಗ್ಗೆ ಅರಿತುಕೊಂಡು ರಾಷ್ಟ್ರದ ರಾಜಕೀಯದ ಧನಾತ್ಮಕ ಬೆಳವಣಿಗೆಗೆ ಸಹಕಾರಿಯಾಗಬೇಕೆಂದರು. ಈ ಸಂದರ್ಭದಲ್ಲಿ ರಾಜ್ಯಶಾಸ್ತ್ರ ವಿಭಾಗದ ವಿದ್ಯಾರ್ಥಿಗಳಿಂದ ತಯಾರಾದ “ರಾಜ್ಯರಂಗ” ಭಿತ್ತಿಪತ್ರಿಕೆಯನ್ನು ಅನಾವರಣಗೊಳಿಸಲಾಯಿತು.


ಕಾಲೇಜಿನ ಪ್ರಾಂಶುಪಾಲರಾದ ಡಾ. ಬಿ.ಎ ಕುಮಾರ್ ಹೆಗ್ಡೆ ಅಧ್ಯಕ್ಷತೆ ವಹಿಸಿದ್ದರು. ಹಾಗೂ ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಡಾ. ಶಲೀಫ್ ಎ. ಪಿ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಹಾಗೆಯೇ ರಾಜ್ಯಶಾಸ್ತ್ರ ವಿಭಾಗದ ಉಪನ್ಯಾಸಕರುಗಳಾದ ನಟರಾಜ್ ಹೆಚ್. ಕೆ, ಭಾಗ್ಯಶ್ರೀ, ಶಿವಕುಮಾರ್ ಮತ್ತು ವಿದ್ಯಾರ್ಥಿಗಳು ಹಾಜರಿದ್ದರು. ವಿದ್ಯಾರ್ಥಿನಿ ನಿಶಾ ಸ್ವಾಗತಿಸಿದರು. ಚಂದನ ಅತಿಥಿ ಪರಿಚಯ ಮಾಡಿದರು. ಹಾಗೆಯೇ ಸಪ್ನಾ ವಂದಿಸಿ ರಿತೇಶ್ ಕಾರ್ಯಕ್ರಮವನ್ನು ನಿರೂಪಿಸಿದರು.


 ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter 

Post a Comment

0 Comments
Post a Comment (0)
To Top