ಎಸ್‌ಡಿಎಂ ಮಹಿಳಾ ಐಟಿಐಯಲ್ಲಿ ವೃತ್ತಿ ಪ್ರಮಾಣ ಪತ್ರ ವಿತರಣೆ

Upayuktha
0

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಹಿಳಾ ಐಟಿಐ ಕಾಲೇಜು ಉಜಿರೆಯಲ್ಲಿ ಜುಲೈ ತಿಂಗಳಿನಲ್ಲಿ ನಡೆದ ಅಖಿಲ ಭಾರತ ವೃತ್ತಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿನಿಯರಿಗೆ ವೃತ್ತಿ ಪ್ರಮಾಣ ಪತ್ರ ವಿತರಣಾ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು ಉಜಿರೆ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಉಷಾಕಿರಣ್ ಎಂ. ಕಾರಂತ್ ಇವರು ಉದ್ಘಾಟಿಸಿದರು.


ಆ ಸಂದರ್ಭದಲ್ಲಿ ಮಾತನಾಡಿದ ಅವರು ಎಸ್‌ಡಿಎಂ ಶಿಕ್ಷಣ ಸಂಸ್ಥೆ ಮಹಿಳಾ ಸಬಲೀಕರಣಕ್ಕೆ ಹೆಚ್ಚಿನ ಒತ್ತು ನೀಡುತ್ತಾ ಬಂದಿದ್ದು ಆ ನಿಟ್ಟಿನಲ್ಲಿ ಉತ್ತಮ  ವ್ಯವಸ್ಥೆಯನ್ನು ಸಂಸ್ಥೆಯಲ್ಲಿ ಕಲ್ಪಿಸಿರುತ್ತಾರೆ. ಇಲ್ಲಿ ಕಲಿತ ವಿದ್ಯಾರ್ಥಿನಿಯರ ಭವಿಷ್ಯ ಉಜ್ವಲವಾಗಲಿ ಎಂದು ಶುಭ ಹಾರೈಸಿದರು.



ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಎಸ್ ಡಿ ಎಂ ಪ್ರೌಢ ಶಾಲೆ ಬೆಳಾಲು ಇಲ್ಲಿನ ಮುಖ್ಯೋಪಾಧ್ಯಾಯರಾದ ಶ್ರೀ ರಾಮಕೃಷ್ಣ ಭಟ್ ಚೊಕ್ಕಾಡಿ ಇವರು ಮಾತನಾಡಿ ಇಲ್ಲಿ ಕಲಿತ ವಿದ್ಯಾರ್ಥಿನಿಯರು ಸ್ವ ಉದ್ಯೋಗ ಮಾಡುವ ಮೂಲಕ ಗ್ರಾಮದ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಬೇಕು ಅಲ್ಲಿ ಬೇಡಿಕೆಗಿಂತ ಗುಣಮಟ್ಟದ ಉತ್ಪಾದನೆಗೆ ಹೆಚ್ಚಿನ ಪ್ರಾಶಸ್ತ್ಯ ನೀಡಬೇಕು ಎಂದು ಹೇಳಿದರು.


ಅಧ್ಯಕ್ಷತೆಯನ್ನು ವಹಿಸಿದ್ದ ಎಸ್‌ಡಿಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿಗಳಾದ ಡಾ. ಎಸ್ ಸತೀಶ್ಚಂದ್ರ ಇವರು ಮಾತನಾಡಿ, ಒಂದು ವಾಹನ ತಯಾರಕ ಸಂಸ್ಥೆ ವಾಹನ ತಯಾರಿಕೆ ಮಾಡಿ ಮಾರಾಟ ಮಾಡಲು ಪರ್ಫಾರ್ಮೆನ್ಸ್ ಸರ್ಟಿಫಿಕೇಟ್ ಎಷ್ಟು ಮುಖ್ಯವೋ ಅಷ್ಟೇ ಮುಖ್ಯ ಇಲ್ಲಿ ಕಲಿತ ವಿದ್ಯಾರ್ಥಿನಿಯರ ಪ್ರಮಾಣ ಪತ್ರ ಈ ಪ್ರಮಾಣ ಪತ್ರದ ಆಧಾರದ ಮೇಲೆ ನಿಮ್ಮ ಭವಿಷ್ಯ ಅಡಗಿದೆ. ಅದೇ ರೀತಿ ಆ ಪ್ರಮಾಣ ಪತ್ರ ನೀವು ಮಾಡುವ ಕೆಲಸದಲ್ಲಿ ನಿಮ್ಮ ಪ್ರತಿಭೆಯನ್ನು ಗುರುತಿಸುತ್ತದೆ ಆದುದರಿಂದ ತುಂಬಾ ಉತ್ತಮ ರೀತಿಯಲ್ಲಿ ಕೆಲಸಗಳನ್ನು ಮಾಡಿ ಸಮಾಜದಲ್ಲಿ ಉತ್ತಮ ಹೆಸರು ಪಡೆಯಿರಿ ಎಂದು ಹೇಳಿ ವಿದ್ಯಾರ್ಥಿನಿಯರಿಗೆ ಶುಭ ಹಾರೈಸಿದರು.


ಪ್ರಾಂಶುಪಾಲರಾದ ವಿ ಪ್ರಕಾಶ್ ಕಾಮತ್ ಸ್ವಾಗತಿಸಿದರು. ಕಿರಿಯ ತರಬೇತಿ ಅಧಿಕಾರಿಯಾಗಿರುವ ಶ್ರೀಮತಿ ಸಂಧ್ಯಾ ಇವರು ಕಾರ್ಯಕ್ರಮ ನಿರೂಪಿಸಿದರು. ಈ ಸಂದರ್ಭದಲ್ಲಿ ವಿದ್ಯಾರ್ಥಿನಿಯರಿಗೆ ರಾಷ್ಟ್ರೀಯ ವೃತ್ತಿ ಪ್ರಮಾಣ ಪತ್ರ ವಿತರಿಸಲಾಯಿತು ಜೊತೆಗೆ 2022-23 ರಲ್ಲಿ ಕಂಪ್ಯೂಟರ್ ವೃತ್ತಿಯಲ್ಲಿ ಮತ್ತು ಸೀವೀಂಗ್ ಟೆಕ್ನಾಲಜಿ ವೃತ್ತಿಯಲ್ಲಿ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿನಿಯರನ್ನು ಪ್ರೋತ್ಸಾಹಿಸಲಾಯಿತು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಚಾನೆಲ್ ಫಾಲೋ ಮಾಡಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top