ಉಜಿರೆಯ ಎಸ್‌.ಡಿ.ಎಂ. ಕಾಲೇಜಿನಲ್ಲಿ ಆತ್ಮಹತ್ಯಾ ತಡೆ ಕಾರ್ಯಕ್ರಮ

Upayuktha
0


ಉಜಿರೆ:  ಆತ್ಮಹತ್ಯೆ ಎಲ್ಲದಕ್ಕೂ ಪರಿಹಾರವಲ್ಲ. ಆ ರೀತಿಯ ಮನಸ್ಥಿತಿಯೇ ಒಂದು ದೊಡ್ಡ ಸಮಸ್ಯೆ. ಇತ್ತೀಚೆಗೆ ಆತ್ಮಹತ್ಯೆಗೆ ಶರಣಾಗುವವರ ಸಂಖ್ಯೆ ಹೆಚ್ಚುತ್ತಿದೆ. ಯುವಜನರು ಸೇರಿದಂತೆ ಮಕ್ಕಳಲ್ಲಿ ಆತ್ಮಹತ್ಯೆಯ ಪ್ರಮಾಣ ಹೆಚ್ಚುತ್ತಿರುವುದು ಆತಂಕಕಾರಿ ಸೂಸೈಡ್‌ ಅಥವಾ ಆತ್ಮಹತ್ಯೆ ಎನ್ನುವುದು ಗಂಭೀರ ಆರೋಗ್ಯ ಸಮಸ್ಯೆ, ಎಲ್ಲದ್ದಕ್ಕೂ ಸಾವೇ ಪರಿಹಾರವಲ್ಲ ಎಂದು ಉಜಿರೆಯ ಸಾನಿಧ್ಯ ಕೌಶಲ್ಯ ತರಬೇತಿ ಕೇಂದ್ರದ ಮುಖ್ಯಸ್ಥೆ ಮಲ್ಲಿಕಾ. ಎಸ್ ಅವರು ನುಡಿದರು.


ಅವರು ಇತ್ತೀಚೆಗೆ ಉಜಿರೆಯ ಶ್ರೀ.ಧ.ಮಂ. ಕಾಲೇಜಿನಲ್ಲಿ ಮನಃಶಾಸ್ತ್ರ ವಿಭಾಗದವತಿಯಿಂದ ಆಯೋಜಿಸಿದ್ದ ಆತ್ಮಹತ್ಯಾ ತಡೆ ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದರು. ಕಾರ್ಯಕ್ರಮವನ್ನು ದೀಪಬೆಳಗಿಸಿ ಉದ್ಘಾಟಿಸಿ ವಿಭಾಗದ ಚಟುವಟಿಕೆಗಳಿಗೆ ಚಾಲನೆ ನೀಡಿದ ಅವರು ವಿಶೇಷ ಸಾಮರ್ಥ್ಯ ಇರುವ ಮಕ್ಕಳನ್ನು ಪೋಷಕರು ಮತ್ತು ಸಮಾಜ ನಿಂದಿಸಬಾರದು. ಅದು ಮುಗ್ದ ಮಕ್ಕಳ ಮನಸ್ಸಿನ ಮೇಲೆ ಪ್ರಭಾವ ಬೀರುತ್ತದೆ ಎಂದರು. ಜೊತೆಗೆ ವಿದ್ಯಾರ್ಥಿಗಳು ಉತ್ತಮ ಮೌಲ್ಯಗಳನ್ನು ರೂಢಿಸಿಕೊಳ್ಳಬೇಕು ಎಂದು ಕಿವಿಮಾತು ಹೇಳಿದರು.


ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಮನಃಶಾಸ್ತ್ರ ವಿಭಾಗದ ಮುಖ್ಯಸ್ಥೆ ಡಾ. ವಂದನಾ ಜೈನ್ ವಹಿಸಿದ್ದರು. ಸಭಾಕಾರ್ಯಕ್ರಮದ ನಂತರ ವಿದ್ಯಾರ್ಥಿಗಳು ತಮ್ಮ ಕಿರಿಯರನ್ನು ಪರಿಚಯಿಸಿ ವಿಭಾಗಕ್ಕೆ ವಿಶಿಷ್ಠವಾಗಿ ಸ್ವಾಗತಿಸಿದರು. ಕಾರ್ಯಕ್ರಮದಲ್ಲಿ ಮನಃಶಾಸ್ತ್ರ ವಿಭಾಗದ ಡಾ. ಸುಧೀರ್, ಪ್ರಾಧ್ಯಾಪಕರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಕ. ಶ್ರಾವ್ಯ ಸ್ವಾಗತಿಸಿ. ಕು. ಅನುಪ್ರಿಯ ಮತ್ತು ರೀದ್ಧಿಶ ನಿರೂಪಿಸಿದರು. ಕು. ವರ್ಷಾ ವಂದಿಸಿದರು.


   ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter    

Post a Comment

0 Comments
Post a Comment (0)
Maruti Suzuki Festival of Colours
Maruti Suzuki Festival of Colours
To Top