ಅವಕಾಶಗಳನ್ನು ಬಳಸಿಕೊಂಡರೆ ಮಾತ್ರ ಜೀವನದಲ್ಲಿ ಗುರಿ ಮುಟ್ಟುವುದಕ್ಕೆ ಸಾಧ್ಯ: ಎಂ.ಎಸ್.ರಘು

Upayuktha
0



ಪುತ್ತೂರು: ಪ್ರತಿಯೊಬ್ಬ ವಿದ್ಯಾರ್ಥಿಯಲ್ಲಿಯೂ ಒಂದಲ್ಲ ಒಂದು ರೀತಿಯ ವಿಶಿಷ್ಟ ಗುಣಗಳು, ಸ್ವಭಾವಗಳು, ಪ್ರತಿಭೆಗಳು ಇರುತ್ತವೆ ಅದನ್ನು ಗುರುತಿಸಿಕೊಂಡು ಲಭ್ಯವಾದ ಅವಕಾಶಗಳನ್ನು ಬಳಸಿಕೊಂಡರೆ ಮಾತ್ರ ಜೀವನದಲ್ಲಿ ನಿಗದಿತ ಗುರಿಯನ್ನು ಮುಟ್ಟುವುದಕ್ಕೆ ಸಾಧ್ಯವಾಗುತ್ತದೆ ಎಂದು ಮೈಸೂರಿನ ಹೆಸರಾಂತ ನ್ಯೂರೋ ಲಿಂಗ್ವಿಸ್ಟಿಕ್ ಪ್ರೊಗ್ರಾಮಿಂಗ್ ಮಾಸ್ಟರ್ ಟ್ರೈನರ್ ರೊಟೇರಿಯನ್ ಎಂ.ಎಸ್.ರಘು ಹೇಳಿದರು.  


ಅವರು ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಮೂಲವಿಜ್ಞಾನ ವಿಭಾಗ ಹಾಗೂ ಪುತ್ತೂರು ರೋಟರಿ ಯುವ ಇದರ ಸಹಯೋಗದೊಂದಿಗೆ ಕಾಲೇಜಿಗೆ ಸೇರಿದ ನೂತನ ವಿದ್ಯಾರ್ಥಿಗಳ ಉದ್ದೀಪನಾ ಕಾರ್ಯಕ್ರಮದಲ್ಲಿ ಎಕ್ಸ್‌ಪ್ಲೋವರ್ ಯುವರ್‍ಸೆಲ್ಫ್ ಎನ್ನುವ ವಿಷಯದ ಬಗ್ಗೆ ಮಾತನಾಡಿದರು. ವ್ಯಕ್ತಿಯೊಬ್ಬ ಜೀವನದಲ್ಲಿ ಯಶಸ್ವಿಯಾಗಬೇಕಾದರೆ ಆತನ ದೌರ್ಬಲ್ಯ ಹಾಗೂ ಸಾಮರ್ಥ್ಯದ ಬಗ್ಗೆ ಆತ್ಮಾವಲೋಕನ ಮಾಡಿಕೊಳ್ಳಬೇಕು ಮತ್ತು ಅದರಂತೆ ಕಾರ್ಯನಿರ್ವಹಿಸಬೇಕು ಎಂದರು. ಕೀಳರಿಯಮೆಯನ್ನು ಮೆಟ್ಟಿ ನಿಂತು ಆಶಾವಾದಿಗಳಾಗಬೇಕು, ಅತಿಯಾದ ಆತಂಕ, ಒತ್ತಡ, ಅತಿಯಾದ ಸಾಮಾಜಿಕ ಸಂವಹನ ಅಥವಾ ಅತಿ ಮೌನ ಹಾಗೂ ಋಣಾತ್ಮಕ ಭಾವನೆಗಳಿಂದ ದೂರವಿರಬೇಕು ಎಂದರು.


ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಆಡಳಿತ ಮಂಡಳಿಯ ಅಧ್ಯಕ್ಷ ವಿಶ್ವಾಸ್ ಶೆಣೈ, ರೋಟರಿ ಸಂಸ್ಥೆಯ ಪದಾಧಿಕಾರಿಗಳಾದ ನರಸಿಂಹ ಪೈ, ಪಶುಪತಿ ಶರ್ಮ, ಕಾಲೇಜಿನ ಪ್ರಾಂಶುಪಾಲ ಡಾ.ಮಹೇಶ್ ಪ್ರಸನ್ನ.ಕೆ, ಮೂಲವಿಜ್ಞಾನ ವಿಭಾಗ ಮುಖ್ಯಸ್ಥ ಪ್ರೊ.ರಮಾನಂದ ಕಾಮತ್, ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗದ ಪ್ರಾಧ್ಯಾಪಕ ಡಾ.ದೀಪಕ್.ಕೆ.ಬಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಗಣಿತಶಾಸ್ತ್ರ ಪ್ರಾಧ್ಯಾಪಕಿ ಪ್ರೊ.ಮಾಧವಿ ಆರ್ ಪೈ ಕಾರ್ಯಕ್ರಮ ನಿರ್ವಹಿಸಿದರು.

 ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter 

Post a Comment

0 Comments
Post a Comment (0)
To Top