ಎಡನೀರು ಮಠದ ಸ್ವಾಮೀಜಿ ಧರ್ಮಸ್ಥಳಕ್ಕೆ ಭೇಟಿ

Upayuktha
0





ಧರ್ಮಸ್ಥಳ: ಕಾಸರಗೋಡು ಎಡನೀರು ಮಠದ ಸಚ್ಚಿದಾನಂದತೀರ್ಥ ಸ್ವಾಮೀಜಿ ಶನಿವಾರ ಧರ್ಮಸ್ಥಳಕ್ಕೆ ಆಗಮಿಸಿದಾಗ ಅವರಿಗೆ ಭವ್ಯ ಸ್ವಾಗತ ಕೋರಲಾಯಿತು. ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಿ ಅವರು ಫಲಮಂತ್ರಾಕ್ಷತೆಯೊಂದಿಗೆ ಪ್ರಸಾದ ನೀಡಿ ಶುಭ ಹಾರೈಸಿದರು. ಬಳಿಕ ದೇವರ ದರ್ಶನ ಮಾಡಿ ವಿಶೇಷ ಪೂಜೆ ಸಲ್ಲಿಸಿದರು.




ಪುರಿ ಜಗನ್ನಾಥ ಕ್ಷೇತ್ರದ ದಂಡಿಸ್ವಾಮಿ ಶಂಕರಾನಂದ ತೀರ್ಥ ಸ್ವಾಮೀಜಿ ಶನಿವಾರ ಧರ್ಮಸ್ಥಳಕ್ಕೆ ಬಂದು ದೇವರ ದರ್ಶನ ಪಡೆದರು. ಬಳಿಕ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು.

إرسال تعليق

0 تعليقات
إرسال تعليق (0)
To Top