ವಿಟ್ಲ- ಅಳಿಕೆ: ಅನುಗ್ರಹ ಸಂಜೀವಿನಿ ಗ್ರಾ.ಪಂ. ಮಟ್ಟದ ಒಕ್ಕೂಟದ ವಾರ್ಷಿಕ ಮಹಾಸಭೆ, ಅಧಿಕಾರ ಹಸ್ತಾಂತರ

Upayuktha
0


ವಿಟ್ಲ: ಅನುಗ್ರಹ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ (ರಿ.) ಅಳಿಕೆ ಇದರ ವಾರ್ಷಿಕ ಮಹಾಸಭೆಯು ಸೆಪ್ಟೆಂಬರ್ 26 ರಂದು ಪಂಚಾಯತ್ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಗ್ರಾ.ಪಂ ಅಧ್ಯಕ್ಷ ಪದ್ಮನಾಭ ಪೂಜಾರಿ ಉದ್ಘಾಟಿಸಿದರು.


ಒಕ್ಕೂಟದ ವಾರ್ಷಿಕ ವರದಿಯನ್ನು ಎಂ.ಬಿ.ಕೆ ವಾರಿಜ ಎನ್ ಮಂಡಿಸಿದರು. ಒಕ್ಕೂಟದ ಕಾರ್ಯದರ್ಶಿ ವಸಂತಿ ಲೆಕ್ಕಪತ್ರ ಪರಿಶೋಧನಾ ವರದಿಯನ್ನು ವಾಚಿಸಿದರು. ವರದಿಗಳನ್ನು ವಿಶೇಷವಾಗಿ ಚಪ್ಪಾಳೆ ತಟ್ಟುವ ಮೂಲಕ ಅನುಮೋದಿಸಲಾಯಿತು. ಬಳಿಕ ನಿಕಟಪೂರ್ವ ಒಕ್ಕೂಟ ದಾಖಲೆಗಳನ್ನು ನೀಡುವ ಮೂಲಕ ನೂತನ ಪದಾಧಿಕಾರಿಗಳಿಗೆ ಅಧಿಕಾರ ಹಸ್ತಾಂತರಿಸಲಾಯಿತು.


ಕಾರ್ಯಕ್ರಮದಲ್ಲಿ ಬಿ.ಆರ್.ಪಿ ಸವಿತಾ, ಪಂಚಾಯತ್ ಸದಸ್ಯರು ಹಾಗೂ ಸಿಬ್ಬಂದಿಗಳು, ಒಕ್ಕೂಟದ ಪದಾಧಿಕಾರಿಗಳು, ಅಂಗನವಾಡಿ ಕಾರ್ಯಕರ್ತೆಯರು, ಆರೋಗ್ಯ ಇಲಾಖೆಯ ಸಿ.ಎಚ್.ಒ, ಗ್ರಂಥಪಾಲಕರು ಉಪಸ್ಥಿತರಿದ್ದರು.


ಒಕ್ಕೂಟದ ಸದಸ್ಯರಿಗೆ ಒಳಾಂಗಣ ಕ್ರೀಡೆಯನ್ನು ಆಯೋಜಿಸಲಾಯಿತು. ಸ್ಪರ್ಧೆಯ ವಿಜೇತರ ಪಟ್ಟಿಯನ್ನು ಒಕ್ಕೂಟ ಕೋಶಾಧಿಕಾರಿ ಶಶಿಕಲಾ ವಾಚಿಸಿದರು.


ಗಾಯತ್ರಿ ಪ್ರಾರ್ಥಿಸಿ, ರಾಜೇಶ್ವರಿ ಸ್ವಾಗತಿಸಿ, ಕೃಷಿ ಸಖಿ ವಂದಿಸಿದರು. ಬಿನಿತ ಕಾರ್ಯಕ್ರಮ ನಿರೂಪಿಸಿದರು. ರಾಷ್ಟ್ರಗೀತೆಯೊಂದಿಗೆ ಸಭೆ ಸಂಪನ್ನಗೊಂಡಿತು. ಅನುಗ್ರಹ ಸಂಜೀವಿನಿ ಒಕ್ಕೂಟದಿಂದ ಊಟದ ವ್ಯವಸ್ಥೆ ಮಾಡಲಾಗಿತ್ತು.



 ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಚಾನೆಲ್ ಫಾಲೋ ಮಾಡಲು ಈ ಲಿಂಕ್ ಕ್ಲಿಕ್ ಮಾಡಿ


web counter 

إرسال تعليق

0 تعليقات
إرسال تعليق (0)
To Top