ವಿವೇಕಾನಂದ ಕಾಲೇಜಿನಲ್ಲಿ ವಿದ್ಯಾಭಾರತಿ ಜಿಲ್ಲಾ ಮಟ್ಟದ ಕ್ರೀಡಾಕೂಟಕ್ಕೆ ಚಾಲನೆ

Upayuktha
0


ಪುತ್ತೂರು: ವಿದ್ಯಾರ್ಥಿಗಳು ಕೇವಲ ಶೈಕ್ಷಣಿಕವಾಗಿ ಸಾಧನೆ  ಮಾಡಿದ ರಷ್ಟೇ ಸಾಲದು. ಮುಂದೆ ಜೀವನಕ್ಕೆ ಬೇಕಾದ ಎಲ್ಲಾ ಅಂಶಗಳು ಅವರಿಗೆ ದೊರೆಯಬೇಕು. ಈ ನಿಟ್ಟಿನಲ್ಲಿ ವಿದ್ಯಾಭಾರತಿಯು ಒಂದೊಳ್ಳೆ ಪ್ರಯತ್ನ ಮಾಡುತ್ತಾ ಬಂದಿದೆ. ಕ್ರೀಡೆಯು ವಿದ್ಯಾರ್ಥಿಗಳಲ್ಲಿ, ದೈಹಿಕ ಆರೋಗ್ಯ ಮತ್ತು ಆತ್ಮ ಸ್ಥೈರ್ಯ ಬೆಳೆಸುತ್ತದೆ. ಸೋತರೂ ಕೂಡ ಮುಂದೆ ಹೇಗೆ ಮುನ್ನಡೆಯಬಹುದು ಮತ್ತು  ಸೋಲು ಗೆಲುವು ಎರಡನ್ನು ಹೇಗೆ ಸಮಾನವಾಗಿ ಸ್ವೀಕರಿಸಬಹುದು ಎಂದು ಕಲಿಸುತ್ತದೆ. ಜೊತೆಯಲ್ಲಿ ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣವನ್ನು ಬೆಳೆಸುತ್ತದೆ ಎಂದು ಪುತ್ತೂರಿನ ವಿವೇಕಾನಂದ ವಿದ್ಯಾವರ್ಧಕ ಸಂಘದ ಉಪಾಧ್ಯಕ್ಷ ಸತೀಶ್ ರಾವ್ ಕಬಕ ಹೇಳಿದರು.


ಇವರು ಪುತ್ತೂರಿನ ವಿವೇಕಾನಂದ ಕಾಲೇಜು ಕ್ರೀಡಾಂಗಣದಲ್ಲಿ  ವಿದ್ಯಾಭಾರತಿ ಅಖಿಲ ಭಾರತೀಯ ಶಿಕ್ಷಾ ಸಂಸ್ಥಾನ್ ವಿದ್ಯಾಭಾರತಿ ಕರ್ನಾಟಕ ಮತ್ತು ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು ಇವರ ಸಹಯೋಗದಲ್ಲಿ ನಡೆದ ಜಿಲ್ಲಾ ಮಟ್ಟದ ಕ್ರೀಡಾಕೂಟ-2023 ವಿವೇಕ ಸಂಭ್ರಮ ಕಾರ್ಯಕ್ರಮದ ಉದ್ಘಾಟಕರಾಗಿ ಮಾತನಾಡಿದರು.


ಕಾರ್ಯಕ್ರಮದಲ್ಲಿ ಪುತ್ತೂರಿನ ಯುವಜನ ಸೇವಾ ಇಲಾಖೆ ಮತ್ತು ಕ್ರೀಡಾ ಅಧಿಕಾರಿ ಶ್ರೀಕಾಂತ್ ಬಿರಾವು ಮುಖ್ಯ ಅತಿಥಿಗಳಾಗಿ  ಮಾತನಾಡಿ, ಕರ್ನಾಟಕ ವಿದ್ಯಾ ಭಾರತಿಯು ನಡೆಸುವ ಈ ಕ್ರೀಡೆಯು ನಿಮ್ಮ ವೈಯುಕ್ತಿಕ ಬೆಳವಣಿಗೆಗೂ ಪೂರಕ. ರಾಜ್ಯ ಮತ್ತು ರಾಷ್ಟ್ರ ಕ್ರೀಡಾಪಟುಗಳಾಗಿ ಗುರುತಿಸಿಕೊಳ್ಳುವುದಕ್ಕೆ ಇದು ಒಳ್ಳೆಯ ಅವಕಾಶ. ಸೋಲು  ಮತ್ತು ಗೆಲುವು ಎಂಬುದು ಇದ್ದದ್ದೆ. ಪ್ರಯತ್ನಪಟ್ಟರೆ ಮುಂದೊಂದು ದಿನ ಗೆಲುವು ಖಂಡಿತ. ಸಮಾಜಕ್ಕೆ ಮುಂದೆ ಒಂದೊಳ್ಳೆಯ ಕ್ರೀಡಾಪಟುಗಳಾಗಿ ಎಂದರು.


ಕಾರ್ಯಕ್ರಮದ ಅಧ್ಯಕ್ಷ ಶ್ರೀರಾಮ ವಿದ್ಯಾ ಸಂಸ್ಥೆ ಕಲ್ಲಡ್ಕ ಇದರ ಸಂಚಾಲಕ ಮತ್ತು ವಿವೇಕಾನಂದ ವಿದ್ಯಾವರ್ಧಕ ಸಂಘದ ನಿರ್ದೇಶಕ ವಸಂತ ಮಾಧವ್ ಕ್ರೀಡಾಪಟುಗಳಿಗೆ ಶುಭ ಹಾರೈಸಿದರು.


ವೇದಿಕೆಯಲ್ಲಿ ಪುತ್ತೂರಿನ ಮಾಜಿ ಶಾಸಕಿ ಶಕುಂತಲಾ ಶೆಟ್ಟಿ ಉಪಸ್ಥಿತರಿದ್ದರು.


ಕ್ರೀಡಾಕೂಟದಲ್ಲಿ ಭಾಗವಹಿಸಿರುವ ಎಲ್ಲ ಸಂಸ್ಥೆಗಳ ವಿದ್ಯಾರ್ಥಿಗಳಿಂದ ಆಕರ್ಷಕ ಪಥ ಸಂಚಲನ ನಡೆಯಿತು.

ಕ್ರೀಡಾ ಕ್ಷೇತ್ರದಲ್ಲಿ ವಿಶೇಷ ಸಾಧನೆಗೈದ ವಿದ್ಯಾರ್ಥಿಗಳಿಂದ ಕ್ರೀಡಾ ಜ್ಯೋತಿ ಆಗಮನವಾಯಿತು.ಅತಿಥಿಗಳು ಕ್ರೀಡಾ ಜ್ಯೋತಿಯನ್ನು ಬೆಳಗಿಸಿದರು.


ಸುಮಾರು 14ಕ್ಕೂ ಹೆಚ್ಚಿನ ಸಂಸ್ಥೆಗಳ 900ಕ್ಕೂ ಅಧಿಕ ವಿದ್ಯಾರ್ಥಿಗಳು ಕ್ರೀಡಾಕೂಟದಲ್ಲಿ ಭಾಗವಹಿಸಿದರು.

ಕಾರ್ಯಕ್ರಮವನ್ನು ವಿದ್ಯಾಭಾರತಿ ದಕ್ಷಿಣ ಕನ್ನಡ ಜಿಲ್ಲೆ, ಜಿಲ್ಲಾ ಪ್ರಮಖ್ ಕರುಣಾಕರ ಸ್ವಾಗತಿಸಿ, ವಿವೇಕಾನಂದಆಂಗ್ಲ ಮಾಧ್ಯಮ ಶಾಲೆ ತೆಂಕಿಲ ಇಲ್ಲಿನ  ಶಿಕ್ಷಕಿಯರಾದ ವಿದ್ಯಾ ರಾಣಿ ವಂದಿಸಿ, ಕೃತಿಕಾ ನಿರ್ವಹಿಸಿದರು. ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ರವಿಶಂಕರ್, ಡಾ.ಜ್ಯೋತಿ ಕುಮಾರಿ, ಯತೀಶ್ ಕುಮಾರ್ ಸಹಕರಿಸಿದರು.


 ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter  

Post a Comment

0 Comments
Post a Comment (0)
To Top