ವಿವೇಕಾನಂದ ಕಾಲೇಜಿನಲ್ಲಿ 42ನೇ ವರ್ಷದ ಗಣೇಶೋತ್ಸವ
ಪುತ್ತೂರು: ಗಣೇಶ ಎಲ್ಲಾ ದೇವತೆಗಳ ಅಧಿದೇವತೆ. ಹಿಂದೂ ಸಮಾಜದಲ್ಲಿ ನಾವೆಲ್ಲ ಒಂದೇ ಎಂಬ ಭಾವನೆಯನ್ನು ಬೆಳೆಸುವ ನಿಟ್ಟಿನಲ್ಲಿ ಬಾಲಗಂಗಾಧರ ತಿಲಕ್ ಸಾರ್ವಜನಿಕ ಗಣೇಶೋತ್ಸವ ಜಾರಿಗೆ ತಂದರು. ನಮ್ಮ ಧರ್ಮ, ಸಂಸ್ಕೃತಿಯನ್ನು ಉಳಿಸುವ ಬಹುದೊಡ್ಡ ಸವಾಲು ನಮ್ಮ ಮುಂದೆ ಇದೆ. ವಿದ್ಯಾರ್ಥಿಗಳ ಯೋಚನೆಯು ಧಾರ್ಮಿಕ ಚಿಂತನೆ ಬೆಳೆಸುವತ್ತ ಇರಬೇಕು. ನಮ್ಮ ದೇಶದ ಮೂಲ ಮುಂದಿನ ಪೀಳಿಗೆಗೆ ತಿಳಿಸುವ ಸಲುವಾಗಿ ವಿವೇಕಾನಂದ ಸಂಸ್ಥೆ ಕಾರ್ಯ ನಿರ್ವಹಿಸುತ್ತಾ ಬಂದಿದೆ ಎಂದು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಕಲ್ಲಡ್ಕ ಪ್ರಭಾಕರ ಭಟ್ ಹೇಳಿದರು.
ಇವರು ಪುತ್ತೂರಿನ ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ( ಸ್ವಾಯತ್ತ) ಇಲ್ಲಿ ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು ಇದರ ಆಶ್ರಯದಲ್ಲಿರುವ ವಿದ್ಯಾಲಯಗಳಿಂದ ಆಚರಿಸಲಾಗುವ 42ನೇ ವರ್ಷದ ಶ್ರೀ ಗಣೇಶೋತ್ಸವ ಸಭಾ ಕಾರ್ಯಕ್ರಮದಲ್ಲಿ ಅಧ್ಯಕ್ಷೀಯ ಮಾತುಗಳನ್ನಾಡಿದರು.
ಕಾರ್ಯಕ್ರಮದಲ್ಲಿ ಪ್ರಶಾಂತಿ ಆಯುರ್ವೇದಿಕ್ ಸಂಸ್ಥೆ ಬೆಂಗಳೂರು ಇದರ ಮುಖ್ಯಸ್ಥ ಮತ್ತು ಆಯುರ್ವೇದ ವೈದ್ಯಡಾ. ಗಿರಿಧರ್ ಕಜೆ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿ, ಆಯುರ್ವೇದ ಭಾರತ ನೆಲದ ವೈದ್ಯ ಪದ್ಧತಿ. ಭಾರತ ಯಾವುದೇ ಕಾಯಿಲೆಗಳನ್ನು ಜಗತ್ತಿಗೆ ನೀಡಲಿಲ್ಲ ಅದಕ್ಕೆ ಪರ್ಯಾಯವಾಗಿ ಆಯುರ್ವೇದವನ್ನು ಜಗತ್ತಿಗೆ ನೀಡಿದೆ. ಔಷಧೀಯ ಸಸ್ಯಗಳಿಗೆ ಅದ್ಭುತವಾದ ಶಕ್ತಿ ಇದೆ. ಭಾರತದ ಹಳ್ಳಿ ಹಳ್ಳಿಗಳಲ್ಲಿ ಮನೆ ಮದ್ದು ಇದೆ. ನಮ್ಮ ದೇಶದಲ್ಲಿ ಅದು ಶ್ರೀಮಂತವಾಗಿದೆ. ಭಾರತೀಯರು ಪರಿಸರದ ಜೊತೆ ಬದುಕುವವರು ಹಾಗೂ ಬೆಳೆಯುವವರು. ನಮ್ಮ ಭಾರತದ ಶ್ರೇಷ್ಠತೆಯಾದ ಆಯುರ್ವೇದವನ್ನು ಬೆಳೆಸಿ ಪೋಷಿಸೋಣ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ತೃತೀಯ ಪತ್ರಿಕೋದ್ಯಮ ವಿದ್ಯಾರ್ಥಿಗಳ ಪ್ರಾಯೋಗಿಕ ಪತ್ರಿಕೆ ವಿಕಸನದ ವಿಶೇಷ ಸಂಚಿಕೆಯನ್ನು ಬಿಡುಗಡೆಗೊಳಿಸಲಾಯಿತು. ಹಾಗೂ ಗಣೇಶೋತ್ಸವ ಕಾರ್ಯಕ್ರಮದ ಸಲುವಾಗಿ ಆಯೋಜಿಸಲಾದ ವಿವಿಧ ಸ್ಪರ್ಧೆಗಳ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.
ವೇದಿಕೆಯಲ್ಲಿ ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಡಾ.ಕೆ .ಎಂ ಕೃಷ್ಣ ಭಟ್ ಉಪಸ್ಥಿತರಿದ್ದರು.
ಕಾರ್ಯಕ್ರಮವನ್ನು ಗಣೇಶೋತ್ಸವ ಸಮಿತಿಯ ಅಧ್ಯಕ್ಷ ಮತ್ತು ವಿವೇಕಾನಂದ ಪಾಲಿಟೆಕ್ನಿಕ್ ಕಾಲೇಜಿನ ಪ್ರಾಂಶುಪಾಲ ಪ್ರೊ. ಚಂದ್ರಕುಮಾರ ಸ್ವಾಗತಿಸಿ, ಗಣೇಶೋತ್ಸವ ಸಮಿತಿಯ ಕಾರ್ಯದರ್ಶಿ ಮತ್ತು ಸಿವಿಲ್ ಇಂಜಿನಿಯರಿಂಗ್ ವಿಭಾಗದ ಪ್ರಾಧ್ಯಾಪಕ ಪ್ರೊ. ಪ್ರಶಾಂತ ವಂದಿಸಿ, ಸಮಾಜಶಾಸ್ತ್ರ ವಿಭಾಗದ ಮುಖ್ಯಸ್ಥೆ ವಿದ್ಯಾ ನಿರ್ವಹಿಸಿದರು.
ವಿವೇಕಾನಂದ ವಿದ್ಯಾವರ್ಧಕ ಸಂಘದ ಅಡಿಯಲ್ಲಿರುವ ಕಾಲೇಜಿನ ವಿದ್ಯಾರ್ಥಿಗಳಿಂದ ಗಣಪತಿಯ ಭವ್ಯ ಶೋಭಾಯಾತ್ರೆಯು ನಡೆಯಿತು. ಸುಮಾರು ಆರು ಸಾವಿರ ವಿದ್ಯಾರ್ಥಿಗಳು, ಆಡಳಿತ ಮಂಡಳಿ ಸದಸ್ಯರು, ಪ್ರಾಂಶುಪಾಲರು, ಉಪನ್ಯಾಸಕರು, ಉಪನ್ಯಾಸಕೇತರ ಬಂಧುಗಳು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
'ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಚಾನೆಲ್ ಫಾಲೋ ಮಾಡಲು ಈ ಲಿಂಕ್ ಕ್ಲಿಕ್ ಮಾಡಿ