ಓಣಂ ಇದೊಂದು ವಿಶ್ವದೆಲ್ಲೆಡೆ ಆಚರಿಸಲ್ಪಡುವ ಸರ್ವಜನರ ಪ್ರೀತಿಯ ಹಬ್ಬ : ಡಾ.ಮಹೇಶ್ ಪ್ರಸನ್ನ.ಕೆ

Upayuktha
0

 


ಪುತ್ತೂರು: ಕೇರಳದ ಅತ್ಯಂತ ಹಳೆಯ ಹಾಗೂ ಸಾಂಪ್ರದಾಯಿಕ ಹಬ್ಬವಾದ ಓಣಂ ಈಗ ಶ್ರದ್ದೆ ಭಕ್ತಿಯಿಂದ ವಿಶ್ವದೆಲ್ಲೆಡೆ ಆಚರಿಸಲ್ಪಡುತ್ತಿದ್ದು ಇದೊಂದು ಸರ್ವಜನರ ಪ್ರೀತಿಯ ಹಬ್ಬ ಎಂದು ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಪ್ರಾಂಶುಪಾಲ ಡಾ.ಮಹೇಶ್ ಪ್ರಸನ್ನ.ಕೆ ಹೇಳಿದರು.


ಅವರು ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯಯಲ್ಲಿ ನಡೆದ ತಿತ್ತಿತ್ತೋಮ್-2023 ಓಣಂ ಆಚರಣೆಯಲ್ಲಿ ಮಾತಾಡಿದರು. ಮಹಾಬಲಿಯು ಪ್ರತಿವರ್ಷವೂ ಓಣಂ ಸಂದರ್ಭದಲ್ಲಿ ಭೂಮಿಗೆ ಮರಳಿ ಬಂದು ಜನರ ಕಷ್ಟಗಳನ್ನು ನಿವಾರಿಸುತ್ತಾನೆ ಎನ್ನುವ ನಂಬಿಕೆ ಇದೆ. ಇದರಿಂದಾಗಿ ಈ ಹಬ್ಬವು ಅತ್ಯಂತ ಮಹತ್ವದ್ದಾಗಿದೆ. ವಿಷ್ಣುವಿನ ವಾಮನ ಅವತಾರದ ಐತಿಹ್ಯವನ್ನೂ ಇದು ತಿಳಿಸುತ್ತದೆ ಎಂದರು. ಓಣಂ ಎಲ್ಲರಿಗೂ ಶುಭವನ್ನು ತರಲಿ ಎಂದು ಹಾರೈಸಿದರು.


ವಿದ್ಯಾರ್ಥಿಗಳು ನಿರ್ಮಿಸಿದ ಬೃಹತ್ ಪೂಕಳಂನ ಮುಂಭಾಗದಲ್ಲಿ ದೀಪ ಬೆಳಗಿಸಿದ ಕಾಲೇಜಿನ ತರಬೇತಿ ಮತ್ತು ನೇಮಕಾತಿ ವಿಭಾಗದ ಮುಖ್ಯಸ್ಥೆ ಪ್ರೊ.ವಂದನಾ ಶಂಕರ್ ಶುಭಹಾರೈಸಿದರು.


ಕಾಲೇಜು ಆಡಳಿತ ಮಂಡಳಿಯ ಸಂಚಾಲಕ ಸುಬ್ರಮಣ್ಯ ಭಟ್ ಟಿ.ಎಸ್ ಅನೇಕತೆಯಲ್ಲಿ ಏಕತೆಯನ್ನು ಸಾರುವ ಇಂತಹ ಹಬ್ಬಗಳು ಎಲ್ಲೆಡೆಯೂ ಆಚರಿಸುವಂತಾಗಬೇಕು. ಪ್ರಕೃತಿಯ ಆರಾಧನೆಯನ್ನು ನಡೆಸುವ ಹಬ್ಬಗಳು ಹೆಚ್ಚು ಹೆಚ್ಚು ಆಚರಣೆಯಾಗಬೇಕು ತನ್ಮೂಲಕ ಪರಿಸರ ಸಂರಕ್ಷಣೆಯ ಬಗ್ಗೆ ಎಲ್ಲರಲ್ಲಿಯೂ ಜಾಗೃತಿ ಮೂಡಬೇಕು ನಡೆಯಿತು. ನೆರೆದಿದ್ದ ಎಲ್ಲಾ ವಿಭಾಗ ಮುಖ್ಯಸ್ಥರಿಗೆ, ಉಪನ್ಯಾಸಕರಿಗೆ, ಸಿಬ್ಬಂದಿಗಳಿಗೆ ಹಾಗೂ ಎಂದು ಶುಭ ಹಾರೈಸಿದರು.


ಓಣಂ ಹಬ್ಬದ ಹಿನ್ನೆಲೆಯನ್ನು ವಿದ್ಯಾರ್ಥಿಗಳು ಈ ಸಂದರ್ಭದಲ್ಲಿ ಪ್ರಸ್ತುತಪಡಿಸಿದರು. ಕೇರಳದ ಸಾಂಪ್ರದಾಯಿಕ ನೃತ್ಯ ತಿರುವತ್ತಿರ ಕಳಿಯನ್ನು ವಿದ್ಯಾರ್ಥಿನಿಯರು ಅಭಿನಯಿಸಿದರ ನಂತದ ಚೆಂಡೆ ಮೇಳ ಕಾರ್ಯಕ್ರಮ ವಿದ್ಯಾರ್ಥಿಗಳಿಗೆ ಸಿಹಿ ತಿಂಡಿ ವಿತರಿಸಿ ಸಂಭ್ರಮಿಸಲಾಯಿತು.

ಕಂಪ್ಯೂಟರ್ ಸೈನ್ಸ್ ವಿಭಾಗದ ವಿದ್ಯಾರ್ಥಿನಿ ಸಾಂದ್ರಾ ಕಾರ್ಯಕ್ರಮ ನಿರ್ವಹಿಸಿದರು.


 ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top