ಉಜಿರೆ: ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವತಿಯಿಂದ ಸ್ವಯಂ ಸೇವಕರಿಗೆ ರಾಷ್ಟ್ರೀಯ ಸೇವಾ ಯೋಜನೆಯ ಗೀತೆಗಳ ಗಾಯನ ಕಾರ್ಯಾಗಾರ ನಡೆಯಿತು.
ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ( ಸ್ವಾಯತ್ತ ) ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಸ್ವಯಂ ಸೇವಕರಾದ ಅಂಜನಾ, ಅಭಿಷೇಕ್, ವಿನುತಾ ಹಾಗೂ ವೀಕ್ಷಾ ಅವರು ರಾಷ್ಟ್ರೀಯ ಸೇವಾ ಯೋಜನೆಯ ವಿವಿಧ ಗೀತೆಗಳ ಗಾಯನ ಕಾರ್ಯಾಗಾರ ನಡೆಸಿದರು.
ಈ ವೇಳೆ ಯೋಜನಾಧಿಕಾರಿ ಡಾ. ಪ್ರಸನ್ನಕುಮಾರ ಐತಾಳ್ ಸ್ವಾಗತಿಸಿದರು. ಸಹ ಯೋಜನಾಧಿಕಾರಿ ಪದ್ಮಶ್ರೀ ರಕ್ಷಿತ್, ಘಟಕದ ನಾಯಕ ಸುದರ್ಶನ ನಾಯಕ್ ಉಪಸ್ಥಿತರಿದ್ದರು. ಘಟಕದ ನಾಯಕಿ ದಕ್ಷಾ ವಂದಿಸಿದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಚಾನೆಲ್ ಫಾಲೋ ಮಾಡಲು ಈ ಲಿಂಕ್ ಕ್ಲಿಕ್ ಮಾಡಿ


