ಮಂಗಳೂರು: ನಾಳೆ ವಿಶ್ವ ಸಾಕ್ಷರತಾ ದಿನಾಚರಣೆ-2023

Upayuktha
0



ಮಂಗಳೂರು: ಜಿಲ್ಲಾಡಳಿತ, ಜಿಲ್ಲಾಪಂಚಾಯತ್, ಬೆಂಗಳೂರಿನ ರಾಜ್ಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಇಲಾಖೆ, ಜಿಲ್ಲಾ ಸಾಕ್ಷರತಾ ಸಮಿತಿ, ಜಿಲ್ಲಾ ಉಪನಿರ್ದೇಶಕರು(ಆಡಳಿತ) ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಉಪನಿರ್ದೇಶಕರು(ಅಭಿವೃದ್ಧಿ) ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ, ಮಂಗಳೂರು ತಾಲೂಕು ಪಂಚಾಯತ್, ಜನ ಶಿಕ್ಷಣ ಟ್ರಸ್ಟ್ ಹಾಗೂ ನವ ಸಾಕ್ಷರರ ಗ್ರಾಮ ವಿಕಾಸ ಕೇಂದ್ರಗಳ ಸಹಭಾಗಿತ್ವದಲ್ಲಿ ಎಲ್ಲರಿಗೂ ಶಿಕ್ಷಣ ಎಂದೆಂದಿಗೂ ಶಿಕ್ಷಣ, ವಿಶ್ವ ಸಾಕ್ಷರತಾ ದಿನಾಚರಣೆ-2023 ಕಾರ್ಯಕ್ರಮ ಸೆ.8ರ ಶುಕ್ರವಾರ ಬೆಳಿಗ್ಗೆ 10.30ಕ್ಕೆ ನಗರದ ಡಾ. ಬಿ.ಆರ್ ಅಂಬೇಡ್ಕರ್ ಸಭಾಭವನದಲ್ಲಿ ಹಮ್ಮಿಕೊಳ್ಳಲಾಗಿದೆ.


ರಾಜ್ಯ ವಿಧಾನಸಭೆಯ ಸಭಾಧ್ಯಕ್ಷರಾದ ಯು.ಟಿ. ಖಾದರ್ ಫರೀದ್ ಅವರು ಘನ ಉಪಸ್ಥಿತಿ ವಹಿಸುವರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು ಹಾಗೂ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಅವರು ಕಾರ್ಯಕ್ರಮ ಉದ್ಘಾಟಿಸುವರು.


ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸಚಿವರಾದ ಎಸ್. ಮಧು ಬಂಗಾರಪ್ಪ ಗೌರವ ಉಪಸ್ಥಿತಿ ವಹಿಸುವರು. ಶಾಸಕರಾದ ಡಿ. ವೇದವ್ಯಾಸ ಕಾಮತ್ ಅಧ್ಯಕ್ಷತೆ ವಹಿಸುವರು.

 

ಮುಖ್ಯ ಅತಿಥಿಗಳಾಗಿ ಸಂಸದರಾದ ನಳಿನ್ ಕುಮಾರ್ ಕಟೀಲ್, ರಾಜ್ಯಸಭಾ ಸಂಸದರಾದ ವೀರೇಂದ್ರ ಹೆಗ್ಗಡೆ, ಶಾಸಕರಾದ ಡಾ. ಭರತ್ ಶೆಟ್ಟಿ ವೈ, ಹರೀಶ್ ಪೂಂಜ, ರಾಜೇಶ್ ನಾಯ್ಕ್ ಯು, ಭಾಗೀರಥಿ ಮುರುಳ್ಯ, ಅಶೋಕ್ ಕುಮಾರ್ ರೈ, ಉಮಾನಾಥ ಎ. ಕೋಟ್ಯಾನ್, ವಿಧಾನ ಪರಿಷತ್ ಶಾಸಕರಾದ ಕೋಟ ಶ್ರೀನಿವಾಸ ಪೂಜಾರಿ, ಬಿ.ಎಂ. ಫಾರೂಕ್, ಕೆ. ಹರೀಶ್ ಕುಮಾರ್, ಎಸ್.ಎಲ್. ಭೋಜೇಗೌಡ, ಪ್ರತಾಪ ಸಿಂಹ ನಾಯಕ್, ಕೆ. ಮಂಜುನಾಥ ಭಂಡಾರಿ, ಮಂಗಳೂರು ಮೇಯರ್ ಜಯಾನಂದ ಅಂಚನ್ ಅವರು ಭಾಗವಹಿಸುವರು.


ವಿಶೇಷ ಆಹ್ವಾನಿತರಾಗಿ ಮಂಗಳೂರಿನ ಜನಶಿಕ್ಷಣ ಟ್ರಸ್ಟ್ ನ ನಿರ್ದೇಶಕರಾದ ಶೀನ ಶೆಟ್ಟಿ ಭಾಗವಹಿಸುವರು.


  ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter  

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top