ಮಂಗಳೂರಿನ ಇ-ಖಾತಾದ ಸಮಸ್ಯೆ ಬಗೆಹರಿಸಿ: ಶಾಸಕ ಕಾಮತ್ ಆಗ್ರಹ

Upayuktha
0


ಮಂಗಳೂರು: ಮಂಗಳೂರಿನಲ್ಲಿ ಅನೇಕ ದಿನಗಳಿಂದ ಇ-ಖಾತಾದ ಸಮಸ್ಯೆ ಉಂಟಾಗಿ ಸಾರ್ವಜನಿಕರು ತೀವ್ರ ತೊಂದರೆ ಅನುಭವಿಸುತ್ತಿದ್ದು ಈ ಬಗ್ಗೆ ಕೂಡಲೇ ಕ್ರಮಕೈಗೊಂಡು ಜನಸಾಮಾನ್ಯರಿಗೆ ಆಗುತ್ತಿರುವ ತೊಂದರೆಯನ್ನು ಸರಿಪಡಿಸಿಕೊಡಬೇಕಾಗಿ ನಗರಾಭಿವೃದ್ಧಿ ಇಲಾಖೆ ಕಾರ್ಯದರ್ಶಿಗಳಾದ  ಅಜಯ್ ನಾಗಭೂಷಣ್ ರನ್ನು ಶಾಸಕ ವೇದವ್ಯಾಸ್ ಕಾಮತ್ ಅವರು ಭೇಟಿ ಮಾಡಿ ಮನವಿ ಸಲ್ಲಿಸಿದರು.


ಕಳೆದ ಕೆಲವು ತಿಂಗಳುಗಳಿಂದ ಸಾರ್ವಜನಿಕರಿಗೆ ಅಗತ್ಯವಾಗಿ ಬೇಕಿರುವ ಇ-ಖಾತಾ ದಲ್ಲಿ ಸಮಸ್ಯೆ ಸೃಷ್ಟಿಯಾಗಿದ್ದು ಒಂದು ಇ - ಖಾತಾ ಸಿಗಲು ಸುಮಾರು 3 ತಿಂಗಳವರೆಗೆ ಕಾಯಬೇಕಾದ ಪರಿಸ್ಥಿತಿ ಇದ್ದು, ಸಾರ್ವಜನಿಕರು ಪ್ರತಿನಿತ್ಯ ಸರ್ಕಾರಿ ಕಛೇರಿ ಅಲೆಯುವಂತಾಗಿ ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ.


ಮಂಗಳೂರು ಮಹಾನಗರ ಪಾಲಿಕೆಯ ಸರ್ವರನ್ನು ಬಿಬಿಎಂಪಿ ಸರ್ವರ್ಗೆ ಲಿಂಕ್ ಮಾಡಿದ ಮೇಲೆ ಈ ಸಮಸ್ಯೆ ಸೃಷ್ಟಿಯಾಗಿ ಅನಗತ್ಯ ಗೊಂದಲಕ್ಕೆ ಆಸ್ಪದವಾಗಿದ್ದು ಕೂಡಲೇ ಇದನ್ನು ಸರಿಪಡಿಸಿ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡುವಂತೆ ಶಾಸಕರು ಅಗ್ರಹಿಸಿದರು.


ಈ ಬಗ್ಗೆ ಪರಿಶೀಲಿಸಿ ಶೀಘ್ರದಲ್ಲಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ನಗರಾಭಿವೃದ್ಧಿ ಇಲಾಖೆ ಕಾರ್ಯದರ್ಶಿಗಳು ಹೇಳಿದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top