ವಿವೇಕಾನಂದ ಕಾಲೇಜಿನ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಎಂ.ಸಿ.ಎ ವಿಭಾಗಕ್ಕೆ 100% ಫಲಿತಾಂಶ

Upayuktha
0


ಪುತ್ತೂರು: ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯದ ಸ್ನಾತಕೋತ್ತರ ಎಂ.ಸಿ.ಎ ವಿಭಾಗದ ವಿದ್ಯಾರ್ಥಿಗಳ ಫಲಿತಾಂಶವು ಪ್ರಕಟಗೊಂಡಿದ್ದು, ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಎಂ.ಸಿ.ಎ ವಿಭಾಗದ ವಿದ್ಯಾರ್ಥಿಗಳು 100% ಫಲಿತಾಂಶದೊಂದಿಗೆ ಉತ್ತಮ ಸಾಧನೆಯನ್ನು ಮಾಡಿದ್ದಾರೆ. 



ಕಳೆದ ಸೆಪ್ಟೆಂಬರ್ ತಿಂಗಳಿನಲ್ಲಿ ನಡೆದ ಪರೀಕ್ಷೆಗೆ ಕಾಲೇಜಿನಿಂದ ಒಟ್ಟು 51 ವಿದ್ಯಾರ್ಥಿಗಳು ಹಾಜರಾಗಿದ್ದು 48 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ ಮತ್ತು 3 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾರೆ. 



ಅರ್ಹ ವಿದ್ಯಾರ್ಥಿಗಳು ಈಗಾಗಲೇ ಕ್ಯಾಂಪಸ್ ನೇಮಕಾತಿಯ ಮೂಲಕ ವಿವಿಧ ಕಂಪೆನಿಗಳಿಗೆ ಆಯ್ಕೆಯಾಗಿದ್ದಾರೆ. 2021 ರಲ್ಲಿ ಪ್ರಾರಂಭವಾದ ಎಂಸಿಎ ವಿಭಾಗದ ಪ್ರಥಮ ತಂಡದ ಈ ವಿದ್ಯಾರ್ಥಿಗಳ ಸಾಧನೆಯನ್ನು ಆಡಳಿತ ಮಂಡಳಿಯ ಅಧ್ಯಕ್ಷ ವಿಶ್ವಾಸ್ ಶೆಣೈ, ಸಂಚಾಲಕ ಸುಬ್ರಮಣ್ಯ ಭಟ್.ಟಿ.ಎಸ್, ನಿರ್ದೇಶಕರು, ಪ್ರಾಂಶುಪಾಲ ಡಾ.ಮಹೇಶ್ ಪ್ರಸನ್ನ.ಕೆ, ಎಂಸಿಎ ವಿಭಾಗದ ನಿರ್ದೇಶಕಿ ಡಾ.ವಂದನಾ.ಬಿ.ಎಸ್, ಉಪನ್ಯಾಸಕರು ಮತ್ತು ಸಿಬ್ಬಂದಿಗಳು ಶ್ಲಾಘಿಸಿದ್ದಾರೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಚಾನೆಲ್ ಫಾಲೋ ಮಾಡಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top