ಆಳ್ವಾಸ್ ಕಾಲೇಜಿನಲ್ಲಿ ನಾಳೆ 'ಸೈಬರ್ ಹಾಸ್ಯ ಸಂಜೆ'

Upayuktha
0



ಮೂಡುಬಿದಿರೆ:  ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಆಳ್ವಾಸ್ ಎಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಕಾಲೇಜು, ಆಳ್ವಾಸ್ ಪದವಿ ಕಾಲೇಜು, ಆಳ್ವಾಸ್ ಹೋಮಿಯೋಪತಿ ಕಾಲೇಜುಗಳ ಕನ್ನಡ ಸಂಘ ಹಾಗೂ ಕರ್ನಾಟಕ ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಮಂಡಳಿ(ಕೆಎಸ್‍ಸಿಇಸ್‍ಟಿ) ಹಾಗೂ ಸೈಸೆಕ್ ಸಹಯೋಗದಲ್ಲಿ ಅ.29ರ ಭಾನುವಾರ ಸಂಜೆ 5 ಗಂಟೆಗೆ ಕಾಲೇಜು ಆಡಿಟೋರಿಯಂ ನಲ್ಲಿ ಸೈಬರ್ ಹಾಸ್ಯ ಸಂಜೆ' ಕಾರ್ಯಕ್ರಮ ನಡೆಯಲಿದೆ.


ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಮೋಹನ ಆಳ್ವ ಉದ್ಘಾಟಿಸುವರು. ವ್ಯವಸ್ಥಾಪಕ ಟ್ರಸ್ಟಿ ವಿವೇಕ್ ಆಳ್ವ, ಪ್ರಾಂಶುಪಾಲ ಡಾ.ಪೀಟರ್ ಫೆನಾರ್ಂಡಿಸ್, ಕಾರ್ಯಕ್ರಮ ಸಂಯೋಜಕರಾದ ಡಾ ದತ್ತಾತ್ರೇಯ, ಡಾ ಗುರುಶಾಂತ್ ವಗ್ಗರ್ ಪಾಲ್ಗೊಳ್ಳುವರು. 


ಚುಟುಕು ಕವಿ ಡುಂಡಿರಾಜ್, ಹಾಸ್ಯ ಕಲಾವಿದ ಎಂ.ಎಸ್.ನರಸಿಂಹ ಮೂರ್ತಿ, ವೈ.ವಿ.ಗುಂಡೂರಾವ್, ಗಂಗಾವತಿ ಪ್ರಾಣೇಶ್ ಹಾಗೂ ಬಸವರಾಜ್ ಮಹಾಮನಿ ಕಾರ್ಯಕ್ರಮ ನಡೆಸಿಕೊಡುವರು. 


 ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
To Top