ಮಂಗಳೂರು: ಒಮ್ಮೆ ರೆಡ್ ಕ್ರಾಸ್ ಸ್ವಯಂ ಸೇವಕನಾದವನು ಜೀವನಪರ್ಯಂತ ಸಮಾಜಮುಖಿ ಮನಃಸ್ಥಿತಿ ಹೊಂದಿರುತ್ತಾನೆ. ಯುವ ರೆಡ್ ಕ್ರಾಸ್ ವಿದ್ಯಾರ್ಥಿಗಳಿಗೆ ನಾಯಕತ್ವ ಗುಣಗಳನ್ನು ಕಲಿಸುವುದರ ಜೊತೆಗೆ ಸಮಾಜವನ್ನು ಅರಿಯುವ ಅವಕಾಶ ಮಾಡಿಕೊಡುತ್ತದೆ, ಎಂದು ಶ್ರೀ ರಾಮಕೃಷ್ಣ ಕಾಲೇಜು ಮಂಗಳೂರು ಇಲ್ಲಿನ ಕನ್ನಡ ವಿಭಾಗದ ಮುಖ್ಯಸ್ಥ ನಟೇಶ್ ಆಳ್ವ ಅಭಿಪ್ರಾಯ ಪಟ್ಟರು.
ಅವರು ನಗರದ ವಿ.ವಿ ಕಾಲೇಜಿನ ರವೀಂದ್ರ ಕಲಾಭವನದಲ್ಲಿ ಯುವ ರೆಡ್ ಕ್ರಾಸ್, ಐಕ್ಯೂಎಸಿ ಸಹಯೋಗದೊಂದಿಗೆ ಶುಕ್ರವಾರ ಆಯೋಜಿಸಿದ್ದ ಒರಿಯಂಟೇಶನ್ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಅದ್ಯಕ್ಷತೆ ವಹಿಸಿದ್ದ ಪ್ರಾಂಶುಪಾಲೆ ಡಾ. ಅನಸೂಯಾ ರೈ ರೆಡ್ ಕ್ರಾಸ್ ಬಗ್ಗೆ ವಿದ್ಯಾರ್ಥಿಗಳು ತೋರುತ್ತಿರುವ ಆಸಕ್ತಿಯನ್ನು ಪ್ರಶಂಸಿಸಿ ಶುಭಕೋರಿದರು.
ಕಾಲೇಜಿನ ಯುವ ರೆಡ್ ಕ್ರಾಸ್ ಘಟಕದ ಕಾರ್ಯಕ್ರಮ ಅಧಿಕಾರಿ ಡಾ. ಭಾರತಿ ಪಿಲಾರ್ ಮಾದಕ ದ್ರವ್ಯ ವ್ಯಸನದ ಆಪಾಯದ ಕುರಿತು ವಿಚಾರ ಮಂಡಿಸಿದರು. ಅದೇ ವಿಷಯದ ಕುರಿತು ಕಾಲೇಜಿನ ರೆಡ್ ಕ್ರಾಸ್ ವಿದ್ಯಾರ್ಥಿಗಳಿಂದ ನಾಟಕ ಪ್ರದರ್ಶನ ನಡೆಯಿತು. ಮಂಗಳೂರು ವಿಶ್ವವಿದ್ಯಾನಿಲಯದ ಯುವ ರೆಡ್ ಕ್ರಾಸ್ ನೋಡಲ್ ಅಧಿಕಾರಿ ಡಾ. ಗಾಯತ್ರಿ ಎನ್ ಯುವ ರೆಡ್ ಕ್ರಾಸ್ ನ ಧ್ಯೇಯೋದ್ದೇಶಗಳನ್ನು ನೆನಪಿಸಿದರು.
ಡಾ. ಭಾರತಿ ಪಿಲಾರ್ ಅತಿಥಿಗಳನ್ನು ಸ್ವಾಗತಿಸಿದರು. ಪತ್ರಿಕೋದ್ಯಮ ವಿಭಾಗದ ಉಪನ್ಯಾಸಕ ಗುರುಪ್ರಸಾದ್ ಟಿ.ಎನ್ ವಂದಿಸಿದರು. ಯುವ ರೆಡ್ ಕ್ರಾಸ್ ವಿದ್ಯಾರ್ಥಿ ಪ್ರತಿನಿಧಿ ಅಭಿಲಾಶ್ ಕಾರ್ಯಕ್ರಮ ನಿರೂಪಿಸಿದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಚಾನೆಲ್ ಫಾಲೋ ಮಾಡಲು ಈ ಲಿಂಕ್ ಕ್ಲಿಕ್ ಮಾಡಿ