ಕಾಂತಾವರ ಕನ್ನಡ ಸಂಘದ ನಾಲ್ಕು ದತ್ತಿನಿಧಿ ಪ್ರಶಸ್ತಿಗಳ ಘೋಷಣೆ

Upayuktha
0



ಮಂಗಳೂರು: ಕಾಂತಾವರ ಕನ್ನಡ ಸಂಘದ ಅಧ್ಯಕ್ಷರಾದ ಡಾ.ನಾ.ಮೊಗಸಾಲೆಯವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ 2023ರ ಸಾಲಿನ ದತ್ತಿನಿಧಿ ಪ್ರಶಸ್ತಿಗಳನ್ನು ಘೋಷಿಸಲಾಗಿದ್ದು, ಶ್ರೀಮತಿ ಸರಸ್ವತಿ ಬಲ್ಲಾಳ್ ಮತ್ತು ಡಾ.ಸಿ.ಕೆ.ಬಲ್ಲಾಳ್ ದಂಪತಿ ಪ್ರತಿಷ್ಠಾನದಿಂದ ನೀಡುವ ‘ಕರ್ನಾಟಕ ಏಕೀಕರಣದ ನೇತಾರ ಕೆ.ಬಿ.ಜಿನರಾಜ ಹೆಗ್ಡೆ ಸ್ಮಾರಕ ಸಾಂಸ್ಕೃತಿಕ ಪ್ರಶಸ್ತಿ’ಯನ್ನು ಬಂಟ್ವಾಳ ತಾಲೂಕಿನ ವಿಟ್ಲ ಸಮೀಪದ ಮೂರ್ಕಜೆಯಲ್ಲಿರುವ ಮೈತ್ರೀಯಿ ಗುರುಕುಲಕ್ಕೆ, ಹಿರಿಯ ಭಾಷಾತಜ್ಞ ಡಾ.ಯು.ಪಿ.ಉಪಾಧ್ಯಾಯ ಅವರ ಹೆಸರಿನ ‘ಮಹೋಪಾಧ್ಯಾಯ ಪ್ರಶಸ್ತಿ’ಯನ್ನು ಉಜಿರೆಯ ಡಾ. ಎಸ್.ಡಿ. ಶೆಟ್ಟಿ ಅವರಿಗೆ, ಧಾರವಾಡದ ಹಿರಿಯ ಸಾಹಿತಿ ಡಾ.ಜಿ.ಎಂ. ಹೆಗಡೆ ಅವರ ದತ್ತಿನಿಧಿಯ ‘ಪ್ರಾಧ್ಯಾಪಕ ಸಂಶೋಧಕ ಪ್ರಶಸ್ತಿ’ಯನ್ನು ಚೆನೈಯ ಡಾ.ಶ್ರೀಕೃಷ್ಣ ಭಟ್ ಅರ್ತಿಕಜೆ ಅವರಿಗೆ ಮತ್ತು ಹಿರಿಯ ರಂಗಕರ್ಮಿ ಶ್ರೀಪತಿ ಮಂಜನಬೈಲ್ ಅವರು ಸ್ಥಾಪಿಸಿದ ದತ್ತಿನಿಧಿಯಿಂದ ಕೊಡಲಾಗುವ ‘ಮಂಜನಬೈಲ್ ರಂಗಸನ್ಮಾನ್’ ಪ್ರಶಸ್ತಿಯನ್ನು ಬೆಂಗಳೂರಿನ ವೈ. ವಿ. ಗುಂಡೂರಾವ್ ಅವರಿಗೆ ನೀಡಲಾಗುವುದೆಂದು ನಿರ್ಣಯಿಸಲಾಗಿದೆ. 


ಪ್ರಶಸ್ತಿಯು ತಲಾ 10,000 ರೂಪಾಯಿಗಳ ಗೌರವ ಸಂಭಾವನೆ, ತಾಮ್ರಪತ್ರ ಮತ್ತು ಸನ್ಮಾನಗಳನ್ನು ಒಳಗೊಂಡಿದ್ದು ಇದೇ ನವಂಬರ್ 1ರಂದು ನಡೆಯುವ ‘ಕಾಂತಾವರ ಉತ್ಸವ’ದಲ್ಲಿ ಧರ್ಮದರ್ಶಿ ಹರಿಕೃಷ್ಣ ಪುನರೂರು ಅವರ ಅಧ್ಯಕ್ಷತೆಯಲ್ಲಿ ಈ ಪ್ರಶಸ್ತಿಗಳನ್ನು ಪ್ರದಾನಿಸಲಾಗುವುದೆಂದು ಸಂಘದ ಪ್ರಧಾನ ಕಾರ್ಯದರ್ಶಿ ಸದಾನಂದ ನಾರಾವಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


 ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಚಾನೆಲ್ ಫಾಲೋ ಮಾಡಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
Advt Slider:
To Top