ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯಲ್ಲಿನ ಅಂಬಿಕಾ ವಿದ್ಯಾಲಯ ಸಿಬಿಎಸ್‍ಇ ಸಂಸ್ಥೆಯ ಆವರಣದಲ್ಲಿರುವ ಶ್ರೀ ಶಂಕರ ಸಭಾಭವನದಲ್ಲಿ ಅಕ್ಟೋಬರ್ 20ರಂದು ಶುಕ್ರವಾರ ಬೆಳಗ್ಗೆ 10.30ಕ್ಕೆ ಶ್ರೀ ಶಾರದಾ ಪೂಜೆ ನಡೆಯಲಿದೆ.
ಆ ಪ್ರಯುಕ್ತ ಎಳೆಯ ಮಕ್ಕಳಿಗೆ ಅಕ್ಷರಾಭ್ಯಾಸ ಕಾರ್ಯಕ್ರಮ ಶಾಸ್ತ್ರೋಕ್ತವಾಗಿ ನಡೆಯಲಿದೆ. ಹೆತ್ತವರು ತಮ್ಮ ಮಕ್ಕಳಿಗೆ ಅಕ್ಷರಾಭ್ಯಾಸ ಮಾಡಿಸಲು ಬಯಸಿದಲ್ಲಿ 9071655688 ಅಥವಾ 08251 233488 ಸಂಖ್ಯೆಗೆ ಕರೆಮಾಡಿ ತಮ್ಮ ಆಗಮನವನ್ನು ಖಚಿತಪಡಿಸುವಂತೆ ಸೂಚಿಸಲಾಗಿದೆ. ಕಾರ್ಯಕ್ರಮಕ್ಕೆ ಆಗಮಿಸುವ ವರು ಭಾರತೀಯ ಉಡುಗೆ – ತೊಡುಗೆಗಳಲ್ಲಿ ಬರುವಂತೆ ಪ್ರಕಟಣೆ ತಿಳಿಸಿದೆ.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ