ಪಣಂಬೂರು: ಪ್ರಧಾನಿ ನರೇಂದ್ರ ಮೋದಿ ಅವರ ಮನ್-ಕೀ-ಬಾತ್ ಕಾರ್ಯಕ್ರಮವು ಮಂಗಳೂರು ನಗರ ಉತ್ತರ ಮಂಡಲ ಪಣಂಬೂರು ಮೊಗವೀರ ಮಹಾಸಭಾ ಭವನ ಚಿತ್ರಾಪುರ ಕುಳಾಯಿ ಇಲ್ಲಿ ನೇರ ಪ್ರಸಾರ ಏರ್ಪಡಿಸಲಾಗಿತ್ತು.
ಹಳ್ಳಿಯಿಂದ ದಿಲ್ಲಿಯವರೆಗಿನ ಜನ ಮೆಚ್ಚಿದ ಮನ್ ಕೀ ಬಾತ್ ಕಾರ್ಯಕ್ರಮದ 106ನೇ ಸಂಚಿಕೆಯು ದೇಶದ 16 ಕೇಂದ್ರಗಳಲ್ಲಿ ನೇರಪ್ರಸಾರ ಆಯೋಜನೆ ಮಾಡಲಾಯಿತು.
ಕೇಂದ್ರ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ನಗರ ಉತ್ತರ ಮಂಡಲದಲ್ಲಿ ನಡೆದ ನೇರ ಪ್ರಸಾರ ಕಾರ್ಯಕ್ರಮದಲ್ಲಿ ದಕ್ಷಿಣ ಕನ್ನಡದ ಸಂಸದರಾದ ನಳಿನ್ ಕುಮಾರ್ ಕಟೀಲ್, ಬಿಜೆಪಿ ದ.ಕ ಜಿಲ್ಲಾಧ್ಯಕ್ಷರಾದ ಸುದರ್ಶನ್ ಮೂಡಬಿದ್ರೆ, ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ. ವೈ. ಭರತ್ ಶೆಟ್ಟಿ ಹಾಗೂ ಭಾ.ಜ.ಪ ಮಂಗಳೂರು ನಗರ ಉತ್ತರ ಮಂಡಲ ಅಧ್ಯಕ್ಷರಾದ ತಿಲಕ್ ರಾಜ್ ಕೃಷ್ಣಾಪುರ ರವರ ಜೊತೆ ಪಕ್ಷದ ವಿವಿಧ ಸ್ಥರದ ಜವಾಬ್ದಾರಿ ಹೊಂದಿದ ಪ್ರಮುಖರು, ಕಾರ್ಯಕರ್ತರು ಉಪಸ್ಥಿತರಿದ್ದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ