ಬೆಂಗಳೂರು: ಗಾಂಧಿ ಶಾಂತಿ ಪ್ರತಿಷ್ಠಾನ, ಕರ್ನಾಟಕ ಗಾಂಧಿ ಸ್ಮಾರಕ ನಿಧಿ ಮತ್ತು ಶೇಷಾದ್ರಿಪುರಂ ಸಂಜೆ ಪದವಿ ಕಾಲೇಜು - ಗಾಂಧಿ ಅಧ್ಯಯನ ಕೇಂದ್ರ ಹಾಗು ಸಮರ್ಪಣ - ಶೇಷಾದ್ರಿಪುರಂ ಸಂಜೆ ಕಾಲೇಜಿನ ಹಿರಿಯ ವಿದ್ಯಾರ್ಥಿಗಳ ಸಂಘದ ಸಂಯುಕ್ತಾಶ್ರಯದಲ್ಲಿ ಈ ನಾಡು ಕಂಡ ಶ್ರೇಷ್ಠ ಮಾನವತಾವಾದಿ , ಸಾವಿರಾರು ಬಡವರಿಗೆ ನ್ಯಾಯದಾನ ಮಾಡಿದ ವಕೀಲರು, ಕನ್ನಡದ ಕೀರ್ತಿಯನ್ನು ಬೆಳಗಿದ ಸಾಹಿತ್ಯ ರತ್ನ ಶ್ರೀ ಅನ್ನದಾನಯ್ಯ ಪುರಾಣಿಕ ಸ್ಮಾರಕ ದತ್ತಿ ಉಪನ್ಯಾಸವನ್ನು ಅ. 20ರಂದು ಸಂಜೆ 6.00 ಗಂಟೆಗೆ ನಗರದ ಶೇಷಾದ್ರಿಪುರಂ ಶಿಕ್ಷಣ ದತ್ತಿ ಸಭಾಂಗಣದಲ್ಲಿ ಏರ್ಪಡಿಸಲಾಗಿದೆ.
ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಮತ್ತು ಗಾಂಧಿ ಶಾಂತಿ ಪ್ರತಿಷ್ಠಾನದ ಅಧ್ಯಕ್ಷರಾದ ಪ್ರೊ. ಮಲ್ಲೇಪುರಂ ಜಿ. ವೆಂಕಟೇಶರವರು ಅಧ್ಯಕ್ಷತೆ ವಹಿಸುವ ಸಭೆಯಲ್ಲಿ ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯರು , ಬೆಂ.ವಿವಿ ಕನ್ನಡ ಅಧ್ಯಯನ ಕೇಂದ್ರದ ಪ್ರಾಧ್ಯಾಪಕರಾದ ಡಾ. ಚಿತ್ತಯ್ಯ ಪೂಜಾರ್ ‘ಕರ್ನಾಟಕ ಸಂಸ್ಕೃತಿಗೆ ವಚನಕಾರರ ಕೊಡುಗೆ’ ಕುರಿತು ಉಪನ್ಯಾಸ ನೀಡಲಿದ್ದಾರೆ.
ಗಾಂಧಿ ಶಾಂತಿ ಪ್ರತಿಷ್ಠಾನದ ನಿಕಟಪೂರ್ವ ಅಧ್ಯಕ್ಷ ಜೀರಿಗೆ ಲೋಕೇಶ್ ವಿಶೇಷ ಆಹ್ವಾನಿತರಾಗಿ, ಕರ್ನಾಟಕ ಗಾಂಧಿ ಸ್ಮಾರಕ ನಿಧಿ ಅಧ್ಯಕ್ಷ ನಾಡೋಜ ಡಾ.ವೂಡೇ ಪಿ. ಕೃಷ್ಣ ಮತ್ತು ವಿಶ್ರಾಂತ ಪ್ರಾಂಶುಪಾಲರು ಹಾಗೂ ದತ್ತಿಯ ದಾನಿಗಳಾದ ಪ್ರೊ. ಚಂದ್ರಿಕಾ ಪುರಾಣಿಕ ಮತ್ತು ಗಾಂಧಿ ಶಾಂತಿ ಪ್ರತಿಷ್ಠಾನದ ಕಾರ್ಯದರ್ಶಿ ಡಾ.ಸತ್ಯಮಂಗಲ ಮಹಾದೇವ, ಕಾಲೇಜಿನ ಪ್ರಾಂಶುಪಾಲ ಪ್ರೋ.ಎನ್.ಎಸ್.ಸತೀಶ್ ಉಪಸ್ಥಿತರಿರುವರು ಎಂದು ಪ್ರಕಟಣೆಯಲ್ಲಿ ತಿಳಿಸಿದೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ