ಕೆ.ಆರ್.ಪೇಟೆ: ಪಟ್ಟಣದ ಪ್ರವಾಸಿ ಮಂದಿರ ವೃತ್ತದಲ್ಲಿ ತಾಲ್ಲೂಕು ಅಪ್ಪು(ಡಾ.ಪುನೀತ್ ರಾಜ್ ಕುಮಾರ್) ಯುವ ಸಾಮ್ರಾಜ್ಯ ನೇತೃತ್ವದಲ್ಲಿ ದಾನಿಗಳ ಸಹಕಾರದಿಂದ ನಿರ್ಮಿಸಲಾಗಿರುವ ಕಂಚಿನ ಪುತ್ತಳಿ ಲೋಕಾರ್ಪಣೆ ಕಾರ್ಯಕ್ರಮವು ಇದೇ ಅ.2ರಂದು ಬೆಳಿಗ್ಗೆ 10ಗಂಟೆಗೆ ನಡೆಯಲಿದ್ದು, ಅಶ್ವಿನಿ ಪುನೀತ್ ರಾಜ್ ಕುಮಾರ್ ಪುತ್ಥಳಿ ಲೋಕಾರ್ಪಣೆ ಮಾಡುವರು.
ಕಾರ್ಯಕ್ರಮದಲ್ಲಿ ತಾಲ್ಲೂಕಿನ ವಿವಿಧ ಗಣ್ಯರು ಹಾಗೂ ಕಿರುತೆರೆ ಹಾಗೂ ಚಲನಚಿತ್ರ ನಟನಟಿಯರು ಭಾಗವಹಿಸಲಿದ್ದಾರೆ. ಹಾಗಾಗಿ ಈ ಕಾರ್ಯಕ್ರಮಕ್ಕೆ ತಾಲ್ಲೂಕಿನ ಪುನೀತ್ ರಾಜಕುಮಾರ್ ಅಭಿಮಾನಿಗಳು, ಸಂಘ ಸಂಸ್ಥೆಗಳು ಪದಾಧಿಕಾರಿಗಳು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಈ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಪುತ್ಥಳಿ ನಿರ್ಮಾಣ ಸಮಿತಿಯ ಸಂಚಾಲಕ ಹಾಗೂ ತಾಲ್ಲೂಕು ಜಯಕರ್ನಾಟಕ ಸಂಘಟನೆಯ ಯುವ ಘಟಕದ ಆಧ್ಯಕ್ಷ ಕೆ.ಎಲ್. ಮಹೇಶ್ ಪ್ರವಾಸಿ ಮಂದಿರದಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ಮನವಿ ಮಾಡಿದರು.
ಈ ಸಂದರ್ಭದಲ್ಲಿ ಲೋಕಾರ್ಪಣೆ ಸಮಿತಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಚಾನೆಲ್ ಫಾಲೋ ಮಾಡಲು ಈ ಲಿಂಕ್ ಕ್ಲಿಕ್ ಮಾಡಿ