ಅಭಿವೃದ್ಧಿಗೆ ಸೌಹಾರ್ದದ ವಾತಾವರಣ ಅಗತ್ಯ: ಅನುಪಮ್ ಅಗರ್ವಾಲ್
ಮಂಗಳೂರು: ಮಂಗಳೂರು ನಗರದ ಅಭಿವೃದ್ಧಿಗೆ ಸಾರ್ವಜನಿಕ ಸಹಭಾಗಿತ್ವದ ಜತೆಗೆ ಸೌಹಾರ್ದದ ವಾತಾವರಣ ಅಗತ್ಯ ಎಂದು ಮಂಗಳೂರು ನಗರ ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಹೇಳಿದರು.
ನಗರದ ಸಹ್ಯಾದ್ರಿ ಕಾಲೇಜು ಕ್ರೀಡಾಂಗಣದಲ್ಲಿ ಭಾನುವಾರ ನಡೆದ ಬ್ರ್ಯಾಂಡ್ ಮಂಗಳೂರು ಸೌಹಾರ್ದ ಕ್ರಿಕೆಟ್ ಪಂದ್ಯಾಟದಲ್ಲಿ ಅವರು ಮುಖ್ಯ ಅತಿಥಿಯಾಗಿ ಮಾತನಾಡಿದರು.
ದ.ಕ ಜಿಲ್ಲಾ ಪಂಚಾಯತ್ ನ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ.ಕೆ. ಆನಂದ ಪಂದ್ಯಾಟ ಉದ್ಘಾಟಿಸಿ ಶುಭ ಹಾರೈಸಿದರು. ದ.ಕ.ಜಿಲ್ಲಾ ಕಾರ್ಯ ನಿರತ ಪತ್ರ ಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ ಅಧ್ಯಕ್ಷತೆ ವಹಿಸಿದ್ದರು.
ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ, ಕಾರ್ಯ ನಿರತ ಪತ್ರಕರ್ತರ ಸಂಘದ ರಾಜ್ಯ ಕಾರ್ಯಕಾರಿಣಿ ಸಮಿತಿ ಸದಸ್ಯ ಜಗನ್ನಾಥ ಶೆಟ್ಟಿ ಬಾಳ, ಹಿರಿಯ ಪತ್ರಕರ್ತ ಮನೋಹರ ಪ್ರಸಾದ್, ಪತ್ರಕರ್ತರ ಸಂಘದ ಕೋಶಾಧಿಕಾರಿ ಪುಷ್ಪ ರಾಜ್ ಬಿ.ಎನ್ ಉಪಸ್ಥಿತರಿದ್ದರು. ಉಪಾಧ್ಯಕ್ಷ ಭಾಸ್ಕರ ರೈ ಕಟ್ಟ ಕಾರ್ಯಕ್ರಮ ನಿರೂಪಿಸಿದರು.
ದ.ಕ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘ, ದ.ಕ ಜಿಲ್ಲಾಡಳಿತ, ದ.ಕ ಜಿಲ್ಲಾ ಪಂಚಾಯತ್, ಪೊಲೀಸ್ ಅಯುಕ್ತಾಲಯ ಮಂಗಳೂರು, ದ.ಕ ಜಿಲ್ಲಾ ಪೊಲೀಸ್ ಇಲಾಖೆ, ಸಹ್ಯಾದ್ರಿ ತಾಂತ್ರಿಕ ಮಹಾ ವಿದ್ಯಾಲಯ ಮತ್ತು ರೋಹನ್ ಕಾರ್ಫೋರೇಷನ್ ಸಹಯೋಗದಲ್ಲಿ ಪಂದ್ಯಾಟ ಆಯೋಜಿಸಲಾಗಿತ್ತು.
ಪೊಲೀಸ್ ಕಮಿಷನರ್ ತಂಡ, ಜಿಲ್ಲಾ ಎಸ್ಪಿ ನೇತೃತ್ವದ ತಂಡ, ಜಿಲ್ಲಾ ಪಂಚಾಯತ್ ಸಿಇಒ ನೇತೃತ್ವದ ತಂಡ, ಜಿಲ್ಲಾ ಕಾರ್ಯನಿರತ ಪತ್ರಕರ್ತರ ಅಧ್ಯಕ್ಷರ ನೇತೃತ್ವದ ತಂಡ ಪಂದ್ಯಾಟದಲ್ಲಿ ಭಾಗವಹಿಸಿದ್ದವು.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಚಾನೆಲ್ ಫಾಲೋ ಮಾಡಲು ಈ ಲಿಂಕ್ ಕ್ಲಿಕ್ ಮಾಡಿ