ಅ.21 ರಂದು ಉಡುಪಿ ಕಾಲೇಜಿನಲ್ಲಿ ಶಾಲಾ ಶಿಕ್ಷಕರ ನೇಮಕಾತಿಗೆ ಕೌನ್ಸಲಿಂಗ್

Upayuktha
0



ಉಡುಪಿ: ಸರಕಾರಿ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ (6 ರಿಂದ 8 ನೇ ತರಗತಿ) ನೇಮಕಾತಿ ನಡೆಯಲಿದೆ. 2022 ರ ನೇಮಕಾತಿಗೆ ಸಂಬಂಧಿಸಿದಂತೆ 2023 ರ ಮಾರ್ಚ್ 8 ರಂದು ಪ್ರಕಟಿಸಲಾದ 1:1 ಮುಖ್ಯ ಆಯ್ಕೆ ಪಟ್ಟಿಯಲ್ಲಿನ ಕೌನ್ಸಿಲಿಂಗ್‌ಗೆ ಅರ್ಹ ಅಭ್ಯರ್ಥಿಗಳ ವಿವರಗಳನ್ನು ಶಾಲಾ ಶಿಕ್ಷಣ ಇಲಾಖೆಯ ವೆಬ್‌ಸೈಟ್  ನಲ್ಲಿ ಪ್ರಕಟಿಸಲಾಗಿರುತ್ತದೆ.



ಸದರಿ ಪಟ್ಟಿಯಲ್ಲಿನ ಅಭ್ಯರ್ಥಿಗಳಿಗೆ ಅಕ್ಟೋಬರ್ 21 ರಂದು ಶನಿವಾರ ಬೆಳಗ್ಗೆ 10.30 ಕ್ಕೆ ಉಡುಪಿಯ ಸರಕಾರಿ  ಬಾಲಕಿಯರ ಪೂರ್ವ ಕಾಲೇಜು (ಪ್ರೌಢ ವಿಭಾಗ) ಇಲ್ಲಿನ ಸವ್ಯಸಾಚಿ ಸಭಾಭವನದಲ್ಲಿ ಕೌನ್ಸಲಿಂಗ್ ನಡೆಯಲಿದ್ದು, ಆಯ್ಕೆಗೊಂಡ ಅಭ್ಯರ್ಥಿಗಳು ನೇಮಕಾತಿಗೆ ಸಂಬಂಧಪಟ್ಟ ಅಗತ್ಯ ದಾಖಲೆ ಹಾಗೂ ಭಾವಚಿತ್ರವಿರುವ ಗುರುತಿನ ಚೀಟಿಯೊಂದಿಗೆ ಹಾಜರಾಗಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಉಪನಿರ್ದೇಶಕರು, ಶಾಲಾ ಶಿಕ್ಷಣ ಇಲಾಖೆ, ಉಡುಪಿ ದೂ.ಸಂಖ್ಯೆ: 0820-2574878 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.  



ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top