ಉಜಿರೆ: ಧರ್ಮಸ್ಥಳದ ಶಾಂತಿವನ ಟ್ರಸ್ಟ್ ಆಶ್ರಯದಲ್ಲಿ ಮೈಸೂರಿನ ಎಚ್.ಡಿ. ಕೋಟೆಯಲ್ಲಿ ತಾಲ್ಲೂಕಿನಾದ್ಯಂತ 80 ಕೇಂದ್ರಗಳಲ್ಲಿ ಇದೇ 11 ರಿಂದ ವಿದ್ಯಾರ್ಥಿಗಳಿಗಾಗಿ ಯೋಗೋತ್ಸವ ಹಾಗೂ ಪಂಚಮುಖಿ ವ್ಯಕ್ತಿತ್ವ ವಿಕಸನ ಶಿಬಿರ ಹಮ್ಮಿಕೊಳ್ಳಲಾಗಿದೆ ಎಂದು ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆಯ ನಿರ್ದೇಶಕ ಡಾ. ಐ. ಶಶಿಕಾಂತ್ ಜೈನ್ ತಿಳಿಸಿದ್ದಾರೆ.
ಬುಧವಾರ ಪೂರ್ವಾಹ್ನ ಹನ್ನೊಂದು ಗಂಟೆಗೆ ಸರಗೂರು ಪಡುವಲು ಮಠದ ಪೂಜ್ಯ ಮಹಾದೇವ ಸ್ವಾಮೀಜಿ ಯೋಗೋತ್ಸವ ಉದ್ಘಾಟಿಸುವರು.
ಎಚ್.ಡಿ. ಕೋಟೆ ತಹಶೀಲ್ದಾರ್ ಸಣ್ಣರಾಮಪ್ಪ ಅಧ್ಯಕ್ಷತೆ ವಹಿಸುವರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಚಾನೆಲ್ ಫಾಲೋ ಮಾಡಲು ಈ ಲಿಂಕ್ ಕ್ಲಿಕ್ ಮಾಡಿ