ಮಂಗಳೂರು: ದದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಹಾಗು ಆಂತರಿಕ ಗುಣಮಟ್ಟ ಖಾತರಿ ಕೋಶ, ಕನ್ನಡ ವಿಭಾಗ ಬೆಸೆಂಟ್ ಮಹಿಳಾ ಕಾಲೇಜು ಸಹಯೋಗದಲ್ಲಿ ಡಾ. ಶಿವರಾಮ ಕಾರಂತರ 122ನೇ ಜನ್ಮದಿನೋತ್ಸವ ಕಾರ್ಯಕ್ರಮವವು ಬೆಸೆಂಟ್ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ಡಾ. ಪ್ರವೀಣ್ ಕುಮಾರ್ ಕೆ. ಸಿ ಅವರು ವಹಿಸಿಕೊಂಡು ಕಾರಂತರ ಬದುಕು ವಿದ್ಯಾರ್ಥಿಗಳಿಗೆ ಪ್ರೇರಣೆ ಆರೀತಿ ಬದುಕಿದಾಗಲೇ ಜೀವನದ ಸಾರ್ಥಕ್ಯ ಸಾಧ್ಯ ಎಂದು ಅಭಿಪ್ರಾಯ ಪಟ್ಟರು.
ದಕ್ಷಿಣ ಕನ್ನಡ ಜಿಲ್ಲಾ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಾ. ಎಂ. ಪಿ ಶ್ರೀನಾಥ್ ಕಾರ್ಯಕ್ರಮದ ಉದ್ಘಾಟನೆಯನ್ನು ನೆರವೇರಿಸಿದರು. ಕಾರ್ಯಕ್ರಮದಲ್ಲಿ ಕಾರಂತರ ಬದುಕು ಬರಹದ ಬಗ್ಗೆ ನಾರಾಯಣ ಗುರು ಪದವಿಪೂರ್ವ ಕಾಲೇಜಿನ ಉಪನ್ಯಾಸಕ ಕೇಶವ ಬಂಗೇರ ಉಪನ್ಯಾಸ ನೀಡಿದರು.
ಕಾರ್ಯಕ್ರಮದಲ್ಲಿ ಬೆಸೆಂಟ್ ಶಿಕ್ಷಣ ಸಂಸ್ಥೆಗಳ ಆಡಳಿತಾಧಿಕಾರಿ ಪ್ರೊ. ರಾಜಶೇಖರ ಹೆಬ್ಬಾರ್, ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯಕಾರಿಣಿ ಸದಸ್ಯ ಡಾ. ಮಾಧವ ಎಂ ಕೆ ಹಾಗೂ ಕ.ಸಾ.ಪ ಕಾರ್ಯದರ್ಶಿಗಳಾದ ಸುಬ್ರಾಯ ಭಟ್, ಅರುಣಾ ನಾಗರಾಜ್ ಹಾಗು ಸನತ್ ಕುಮಾರ್ ಜೈನ್ ಮತ್ತಿತರರು ಉಪಸ್ಥಿತರಿದ್ದರು. ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥ ಡಾ. ಗಿರಿಯಪ್ಪ ಅತಿಥಿಗಳನ್ನು ಸ್ವಾಗತಿಸಿದರು. ಕನ್ನಡ ವಿಭಾಗದ ಉಪನ್ಯಾಸಕಿ ಜ್ಞಾನೇಶ್ವರಿ ಕಾರ್ಯಕ್ರಮವನ್ನು ನಿರೂಪಿಸಿದರು ಮತ್ತು ನಿಶ್ಮಿತ ಧನ್ಯವಾದ ಸಮರ್ಪಿಸಿದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಚಾನೆಲ್ ಫಾಲೋ ಮಾಡಲು ಈ ಲಿಂಕ್ ಕ್ಲಿಕ್ ಮಾಡಿ