ಮಂಗಳೂರು: ವಿದ್ಯಾರ್ಥಿಗಳು ಹಸಿವು ಮುಕ್ತರಾಗಿ ಅಭ್ಯಾಸಿಸಬೇಕೆಂಬ ಪರಿಕಲ್ಪನೆಯ ಉಚಿತ ಮದ್ಯಾಹ್ನದ ಊಟದ ವ್ಯವಸ್ಥೆ ವಿಶಿಷ್ಟವಾದುದು ಎಂದು ಗೋವಿಂದ ದಾಸ ಕಾಲೇಜು ಅಲ್ಯುಮ್ನಿ ಅಸೋಸಿಯೇಶನ್‍ನ ಅಧ್ಯಕ್ಷ ರಮೇಶ್ ರಾವ್ ಎಂ. ನುಡಿದರು.
ಅವರು ಗೋವಿಂದ ದಾಸ ಕಾಲೇಜಿನ ರಕ್ಷಕ ಶಿಕ್ಷಕ ಸಂಘವು ಆಯೋಜಿಸುತ್ತಿರುವ ಮದ್ಯಾಹ್ನದ ಊಟದ ಯೋಜನೆಯ ಉದ್ಘಾಟನೆ ಹಾಗೂ ಫಲಾನುಭವಿಗಳಿಗೆ ಕೂಪನ್‍ಗಳ ವಿತರಣಾ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು.
ಕಾಲೇಜಿನ ಆಡಳಿತಾತ್ಮಕ ನಿರ್ದೇಶಕ ಪ್ರೊ. ರಮೇಶ್ ಕುಳಾಯಿ ಮಾತನಾಡಿ ದಾನಿಗಳ ನೆರವಿನಿಂದ ಕಾಲೇಜು ಅನೇಕ ವರ್ಷಗಳಿಂದ ಅರ್ಹ ವಿದ್ಯಾರ್ಥಿಗಳಿಗೆ ಮದ್ಯಾಹ್ನದ ಊಟದ ವ್ಯವಸ್ಥೆ ಮಾಡುತ್ತಿದ್ದು ವಿದ್ಯಾರ್ಥಿಗಳು ಸದುಪಯೋಗ ಪಡಿಸಿಕೊಳ್ಳಬೇಕೆಂದರು.
ಆಂತರಿಕ ಗುಣಮಟ್ಟ ಖಾತರಿ ಕೋಶದ ಸಂಯೋಜಕ ಪ್ರೊ.ಹರೀಶ ಆಚಾರ್ಯ ಪಿ. ಯೋಜನೆಯ ಸ್ವರೂಪವನ್ನು ತಿಳಿಸಿದರು. ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ಹರೀಶ್ ಕುಮಾರ್ ಶುಭ ಹಾರೈಸಿದರು. ಕಾಲೇಜಿನ ಪ್ರಾಚಾರ್ಯ ಪ್ರೊ. ಕೃಷ್ಣಮೂರ್ತಿ ಪಿ, ಉಪಪ್ರಾಂಶುಪಾಲ ಪ್ರೊ. ರಮೇಶ್ ಭಟ್ ಎಸ್.ಜಿ., ಸ್ಟಾಫ್ ಅಸೋಸಿಯೇಶನ್‍ನ ಕಾರ್ಯದರ್ಶಿ ಗೀತಾ ಕೆ., ಡಾ.ಪ್ರಶಾಂತ್ ಎಂ.ಡಿ., ಪೂರ್ಣಿಮಾ ಗೋಖಲೆ ಉಪಸ್ಥಿತರಿದ್ದರು. ರಕ್ಷಕ ಶಿಕ್ಷಕ ಸಂಘದ ಕಾರ್ಯದರ್ಶಿ ಶೈಲಜಾ ಹೆಚ್. ಸ್ವಾಗತಿಸಿ ಜೊತೆ ಕಾರ್ಯದರ್ಶಿ ವಿದ್ಯಾ ಪಾಟೀಲ್ ವಂದಿಸಿದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಚಾನೆಲ್ ಫಾಲೋ ಮಾಡಲು ಈ ಲಿಂಕ್ ಕ್ಲಿಕ್ ಮಾಡಿ