ಉಜಿರೆ ಎಸ್.ಡಿ.ಎಂ ಕಾಲೇಜಿನಲ್ಲಿ ಗಾಂಧಿ ಜಯಂತಿ ಆಚರಣೆ

Upayuktha
0



ಉಜಿರೆ: ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನಲ್ಲಿ ರೋವರ್ಸ್- ರೇಂಜರ್ಸ್ ಹಾಗೂ ರಾಷ್ಟ್ರೀಯ ಸೇವಾ ಯೋಜನೆ (ಎನ್ನೆಸ್ಸೆಸ್) ಘಟಕಗಳ ಜಂಟಿ ಸಹಯೋಗದಲ್ಲಿ ಅ.2ರಂದು ಗಾಂಧಿ ಜಯಂತಿ ಆಚರಣೆ ನಡೆಯಿತು. ಉಜಿರೆ ರುಡ್ಸೆಟ್ ಸಂಸ್ಥೆಯ ಕಾರ್ಯನಿರ್ವಾಹಕ ನಿರ್ದೇಶಕ ಗಿರಿಧರ್ ಕಲ್ಲಾಪುರ ಅವರು ಮುಖ್ಯ ಅತಿಥಿಯಾಗಿ ಪಾಲ್ಗೊಂಡಿದ್ದರು.



ಕಾಲೇಜಿನ ಆವರಣದಲ್ಲಿ ಗಾಂಧೀಜಿ ಪ್ರತಿಮೆಗೆ ಮಾಲಾರ್ಪಣೆ ಮಾಡಿ, ಕಾರ್ಯಕ್ರಮ ಉದ್ಘಾಟಿಸಿ, ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿದ ಅವರು, “ಜೀವನದಲ್ಲಿ ಸತ್ಯವನ್ನು ಪಾಲಿಸಿದರೆ ನಮ್ಮ ಸಮಸ್ಯೆಗಳು ಅರ್ಧಕ್ಕರ್ಧ ನಿವಾರಣೆಯಾಗುತ್ತವೆ. ಸತ್ಯವೊಂದೇ ಅಸ್ತಿತ್ವದಲ್ಲಿ ಇದೆ; ಸುಳ್ಳಲ್ಲ” ಎಂದರು.



“ಭಾರತಕ್ಕಲ್ಲದೆ ಇಡೀ ವಿಶ್ವಕ್ಕೆ ಅಹಿಂಸೆ ಹಾಗೂ ಸತ್ಯದ ಅರಿವು ಮೂಡಿಸಿದವರು ಗಾಂಧೀಜಿ. ಅವರ ತತ್ತ್ವಗಳನ್ನು ಅಳವಡಿಸಿಕೊಂಡರೆ ನಮ್ಮಲ್ಲಿ ಅಗಾಧ ಆತ್ಮಸ್ಥೈರ್ಯ ಬೆಳೆಯುತ್ತದೆ. ಅವರ ಆದರ್ಶಗಳನ್ನು ಪಾಲಿಸುವುದು ಅಗತ್ಯ” ಎಂದು ಗಿರಿಧರ್ ಕಿವಿಮಾತು ಹೇಳಿದರು.



ಕಾಲೇಜಿನ ಪ್ರಾಂಶುಪಾಲ ಡಾ. ಬಿ. ಎ. ಕುಮಾರ ಹೆಗ್ಡೆ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, “ಗಾಂಧೀಜಿ ಅವರ ಸರಳತೆ, ಶ್ರೇಷ್ಠ ವ್ಯಕ್ತಿತ್ವ ನಮಗೆಲ್ಲ ಮಾದರಿ. ರೋವರ್ಸ್ - ರೇಂಜರ್ಸ್ ಹಾಗೂ ಎನ್ನೆಸ್ಸೆಸ್ ಈ ಎರಡೂ ಘಟಕಗಳಿಂದ ಗಾಂಧೀಜಿ ಅವರಿಗೆ ಅತ್ಯಂತ ಪ್ರಿಯವಾದ ತತ್ವಗಳ ಪಾಲನೆಯಾಗುತ್ತದೆ” ಎಂದರು.



“ಭಾರತದ ಪುಣ್ಯ ಪುರುಷ ಮೋಹನ್ ದಾಸ್ ಕರಮಚಂದ್ ಗಾಂಧಿ ಮಹಾತ್ಮ ಗಾಂಧಿಯಾದ ಚರಿತ್ರೆಯನ್ನು ಅವರದೇ ಆತ್ಮಕಥೆಯಾದ ‘ದಿ ಸ್ಟೋರಿ ಆಫ್ ಮೈ ಎಕ್ಸ್ಪೆರಿಮೆಂಟ್ಸ್ ವಿಥ್ ಟ್ರೂತ್’ ಪುಸ್ತಕವನ್ನು ವಿದ್ಯಾರ್ಥಿಗಳು ಓದಬೇಕು. ಗಾಂಧೀಜಿ ಆದರ್ಶಗಳನ್ನು ನಿಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು” ಎಂದು ಅವರು ಸಲಹೆ ನೀಡಿದರು.



ಕಾಲೇಜಿನ ಎನ್ನೆಸ್ಸೆಸ್ ಅಧಿಕಾರಿ ಪ್ರೊ. ದೀಪಾ ಆರ್.ಪಿ. ಉಪಸ್ಥಿತರಿದ್ದರು. ರೋವರ್ಸ್ - ರೇಂಜರ್ಸ್ ಅಧಿಕಾರಿಗಳಾದ ರೋವರ್ ಸ್ಕೌಟ್ ಲೀಡರ್ ಪ್ರಸಾದ್ ಕುಮಾರ್ ಸ್ವಾಗತಿಸಿ, ರೇಂಜರ್ ಲೀಡರ್ ಗಾನವಿ ಡಿ. ವಂದಿಸಿದರು. ವಿದ್ಯಾರ್ಥಿನಿ ಪುಣ್ಯಶ್ರೀ ಕಾರ್ಯಕ್ರಮ ನಿರೂಪಿಸಿದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಚಾನೆಲ್ ಫಾಲೋ ಮಾಡಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
To Top